ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ಸಮೀಕ್ಷೆ

Spread the love

ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ಸಮೀಕ್ಷೆ

ಮಂಗಳೂರು : 2018-19ನೇ ಶೈಕ್ಷಣಿಕ ಸಾಲಿನಲ್ಲಿ 6 ವರ್ಷದಿಂದ 16 ವರ್ಷದ ವಯೋಮಾನದ ಮಕ್ಕಳ ಹಾಗೂ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ಸಮೀಕ್ಷೆ ನಡೆಸಲು ಪತ್ತೆಯಾದ ಬಾಲಕಾರ್ಮಿಕರ ಪುನರ್ವಸತಿಗಾಗಿ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಗ್ರಾಮೀಣ ಅಭಿವೃಧ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಹಾಗೂ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಕಲಂ 17ರಡಿ ನೇಮಕಗೊಂಡ ಇತರೆ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ಸಹಾಯಕ ಕಾರ್ಮಿಕ ಆಯುಕ್ತರು, ಮಂಗಳೂರು ವಿಭಾಗ, ಮಂಗಳೂರು ಇವರ ಕಚೇರಿಯಲ್ಲಿ ನಡೆಸಲಾಯಿತು.

ಸಮೀಕ್ಷೆಯನ್ನು ಸಮಗ್ರವಾಗಿ ನಡೆಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮಕ್ಕಳ ಗ್ರಾಮ ಸಭೆಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಭಾಗವಹಿಸುತ್ತಿರುವ ಬಗ್ಗೆ ಹಾಗೂ ನವೆಂಬರ್ 21 ರಿಂದ 29 ರವರೆಗೆ ಹಠಾತ್ ದಾಳಿಯನ್ನು ಕೈಗೊಂಡು ಬಾಲಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರು ಕಂಡು ಬಂದಲ್ಲಿ ಕಾನೂನು ಕ್ರಮ ಜರುಗಿಸುವಂತೆ ಸಹಾಯಕ ಕಾರ್ಮಿಕ ಆಯುಕ್ತರು ಸೂಚಿಸಿದರು.

ತದನಂತರ ಬಾಲಕಾರ್ಮಿಕರು ಹಾಗೂ ಕಿಶೋರಕಾರ್ಮಿಕರು ಹೆಚ್ಚಾಗಿ ಕೆಲಸಕ್ಕೆ ನೇಮಿಸಿಕೊಳ್ಳುವ ಅಪಾರ್ಟಮೆಂಟ್‍ಗಳು ಕಟ್ಟಡ ನಿರ್ಮಾಣ ಸ್ಥಳಗಳು, ಮರಳು ಎತ್ತುವ ಪ್ರದೇಶಗಳು, ಕಲ್ಲು ಕ್ವಾರಿ, ಹೋಟೆಲ್, ಛತ್ರಗಳು, ಚಿತ್ರಮಂದಿರಗಳು, ಕೃಷಿ, ತೋಟಗಾಗಿಕಾ ಪ್ರದೇಶಗಳು, ರಸ್ತೆ ಕಾಮಗಾರಿ, ಬುಡಕಟ್ಟು ಜನಾಂಗ, ಮೀನುಗಾರಿಕಾ ಪ್ರದೇಶ ಬಂದರು ಪ್ರದೇಶ, ಸಣ್ಣ ಕಾರ್ಖಾನೆಗಳು, ಗ್ಯಾರೇಜ್ ಮುಂತಾದ ಸಂಸ್ಥೆಗಳಿಗೆ ಬಾಲಕಾರ್ಮಿಕರು ಹಾಗೂ ಕಿಶೋರಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿರುವ ಬಗ್ಗೆ ಪತ್ತೆ ಹಚ್ಚಲು ವಿವಿಧ ಇಲಾಖೆಗಳ ನಿರೀಕ್ಷಕರೊಂದಿಗೆ ಹಠಾತ್ ದಾಳಿ ಕೈಗೊಳ್ಳಲಾಯಿತು ಎಂದು ಸಹಾಯಕ ಕಾರ್ಮಿಕ ಆಯುಕ್ತರು, ಮಂಗಳೂರು ವಿಭಾಗ, ಇವರ ಪ್ರಕಟಣೆ ತಿಳಿಸಿದೆ.


Spread the love