ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಜನಜಾಗೃತಿ ಜಾಥಾಕ್ಕೆ ಡಿಸಿ ಸಿಂಧೂ ಬಿ. ರೂಪೇಶ್ ಚಾಲನೆ
ಮಂಗಳೂರು: ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಜಿಲ್ಲೆಯಾದ್ಯಂತ ನಡೆಯಲಿರುವ ಜನಜಾಗೃತಿ ಅಂಗವಾಗಿ ವಾಹನ ಜಾಥಾಕ್ಕೆ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಚಾಲನೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ನೇತೃತ್ವದಲ್ಲಿ ನಡೆದ ಈ ಜಾಥಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ಮಂಗಳೂರು ವಕೀಲರ ಸಂಘ ಸಹಭಾಗಿತ್ವದಲ್ಲಿ ನಡೆಯಲಿದೆ.
ಜಿಲ್ಲೆಯಾದ್ಯಂತ ವಾಹನ ಜಾಥಾ ತೆರಳಲಿದ್ದು, ಬಾಲ ಕಾರ್ಮಿಕ ಪದ್ಧತಿ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಜನಜಾಗೃತಿ ಮಾಡಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುರಳೀಧರ ಪೈ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎ.ಜಿ. ಗಂಗಾಧರ್, ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ರವಿ ನಾಯಕ್, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎನ್. ನರಸಿಂಹ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಎಚ್. ವಿ. ರಾಘವೇಂದ್ರ, ಕಾರ್ಮಿಕ ಇಲಾಖೆ ಅಧಿಕಾರಿಗಳಾದ ಕೆ. ಬಿ. ನಾಗರಾಜ್, ವಿಲ್ಮಾ ಎಲಿಜಬೆತ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.