ಬಿಜೆಪಿಗರಿಂದ ಹಲ್ಲೆಗೊಳಗಾದ ಕಾರ್ಯಕರ್ತನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಪ್ರಮೋದ್ ಮಧ್ವರಾಜ್
ಉಡುಪಿ: ಬಿಜೆಪಿ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿ ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತ ಬಡಾನಿಡಿಯೂರಿನ ಸುನೀಲ್ ಡಿಸೋಜಾ ಅವರನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಬಳಿಕ ಮಾತನಾಡಿದ ಅವರು ಈ ಹಿಂದೆ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದ ವೇಳೆ ಯಾವುದೇ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾಗದಂತೆ ನಾನು ನೋಡಿಕೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಶಾಸಕರು ಆಯ್ಕೆಯಾದ ಬಳಿಕ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಿರಂತರ ಹಲ್ಲೆ ರಾಜಕೀಯ ದುರುದ್ದೇಶದಿಂದ ಹಲ್ಲೆ ನಡೆಸಲಾಗುತ್ತದೆ ಇದು ಖಂಡನೀಯ. ಪಕ್ಷದ ಯಾವುದೇ ಕಾರ್ಯಕರ್ತನಿಗೆ ನೋವಾದಲ್ಲಿ ನಾನು ಸುಮ್ಮನಿರವುದಿಲ್ಲ ಅಲ್ಲದೆ ಅವರ ಬೆಂಬಲಕ್ಕೆ ಸದಾ ನಾನಿದ್ದು ಪೋಲಿಸರು ನಿಷ್ಪಕ್ಷಪಾತ ರೀತಿಯಲ್ಲಿ ತನಿಖೆ ನಡೆಸಿ ಹಲ್ಲೆ ನಡೆಸಿದವರು ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಬೇಕು ಮತ್ತು ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸಿದಂತೆ ಸೂಕ್ತ ಕ್ರಮವಹಿಸುವಂತೆ ಅಧಿಕಾರಿಗಳು ಗಮನವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಯತೀಶ್ ಕರ್ಕೇರಾ ಹಾಗೂ ಇತರರು ಉಪಸ್ಥಿತರಿದ್ದರು.