Home Mangalorean News Kannada News ಬಿಜೆಪಿಗರಿಗೆ ಕಾಂಗ್ರೆಸ್ ಸರಕಾರದ ವಿರುದ್ದ ಮಾತನಾಡಲು ಯಾವುದೇ ವಿಷಯ ಇಲ್ಲ: ವಿಷ್ಣುನಾಥ್

ಬಿಜೆಪಿಗರಿಗೆ ಕಾಂಗ್ರೆಸ್ ಸರಕಾರದ ವಿರುದ್ದ ಮಾತನಾಡಲು ಯಾವುದೇ ವಿಷಯ ಇಲ್ಲ: ವಿಷ್ಣುನಾಥ್

Spread the love

ಬಿಜೆಪಿಗರಿಗೆ ಕಾಂಗ್ರೆಸ್ ಸರಕಾರದ ವಿರುದ್ದ ಮಾತನಾಡಲು ಯಾವುದೇ ವಿಷಯ ಇಲ್ಲ: ವಿಷ್ಣುನಾಥ್

ಮಂಗಳೂರು: ಬಿಜೆಪಿಗರಿಗೆ ಕಾಂಗ್ರೆಸ್ ವಿರುದ್ದ ಮಾತನಾಡಲು ಯಾವುದೇ ವಿಷಯ ಇಲ್ಲದ ಪರಿಣಾಮ ಸಿದ್ದರಾಮಯ್ಯ ಸರಕಾರದ ಜನಪ್ರಿಯತೆಯಿಂದ ಹೆದರಿದ ಬಿಜೆಪಿಗರು ಸರಕಾರದ ವಿರುದ್ದ ಸುಳ್ಳು ಸುದ್ದಿ ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅಖಿಲ ಭಾರತೀಯ ಕಾಂಗ್ರೆಸಿನ ಕಾರ್ಯದರ್ಶಿ ಪಿ ಸಿ ವಿಷ್ಣುನಾಥನ್ ಹೇಳಿದರು.

ಅವರು ಸೋಮವಾರ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ ನುಡಿಯದೆ ಮಾಡುವವ ಉತ್ತಮ, ನುಡಿದು ಮಾಡುವವ ಮಧ್ಯಮ, ನುಡಿದು ಮಾಡದವ ಅಧಮ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿಯದೆ ಮಾಡುವ ವರ್ಗಕ್ಕೆ ಸೇರಿದ್ದಾರೆ. ಜನರ ಖಾತೆಗೆ ಹಣ ಜಮಾ ಮಾಡುತ್ತೇವೆ ಎಂದು ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಆ ಪ್ರಕಾರ ನಡೆದುಕೊಂಡಿಲ್ಲ ಎಂದರು.

ಅಭಿವೃದ್ಧಿಯ ಬಗ್ಗೆ ಮುಕ್ತ ಚರ್ಚೆಗೆ ಕಾಂಗ್ರೆಸ್ ಸಿದ್ದವಿದ್ದು, ಬಿಜೆಪಿಯವರಿಗೆ ಅಭಿವೃದ್ಧಿಯ ಬಗ್ಗೆ ಮಾತನಾಡಲು ವಿಷಯವಿಲ್ಲ. ಎಲ್ಲರಿಗೂ ಸಮಾನ ಸ್ಥಾನಮಾನ ನೀಡಿ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡುವಂತೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಭಿವೃದ್ಧಿಗಾಗಿ ಎಲ್ಲರನ್ನೂ ಜೊತೆ ಸೇರಿಸಿಕೊಂಡು ಹೋಗುತ್ತಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.


Spread the love

Exit mobile version