ಬಿಜೆಪಿಗರಿಗೆ ಮತಯಾಚನೆಗೆ ಹೇಳಿಕೊಳ್ಳುವ ಯಾವುದೇ ಸಾಧನೆಗಳಿಲ್ಲ – ಜಯಪ್ರಕಾಶ್ ಹೆಗ್ಡೆ
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಈ ಸಭೆಯು ಮಾಜಿ ಸಚಿವರು, ಮಾಜಿ ಸಂಸದರು, ಉಡುಪಿ-ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಕೆ. ಜಯಪ್ರಕಾಶ್ ಹೆಗ್ಡೆ ಅವರ ಉಪಸ್ಥಿತಿಯಲ್ಲಿ ಹಾಗೂ ನಾಯಕರ ಸಮ್ಮುಖದಲ್ಲಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವು ಉದ್ಘಾಟನೆಗೊಂಡಿತು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಜಯಪ್ರಕಾಶ್ ಹೆಗ್ಡೆ ಅವರಿಗೆ ಹೂಮಾಲೆ ಹಾಕಿ ಶಾಲು ಹೊದಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಮನೋಜ್ ಕರ್ಕೇರ ಅವರಿಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಿದರು.
ಅಭ್ಯರ್ಥಿಗಳಾದ ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ ಜಿಲ್ಲೆಯಾಗಲು ಕಾರಣನಾಗಿದ್ದೇನೆ ಹಾಗೂ ಅಂದು ಉಡುಪಿ ಜಿಲ್ಲೆಯಾಗಿದ್ದರಿಂದ ಇಂದು ಉಡುಪಿ ಜಿಲ್ಲೆಯು ಇಷ್ಟು ಅಭಿವೃದ್ಧಿಯಾಗಲು ಸಹಕಾರಿಯಾಗಿದೆ. ಮೀನುಗಾರರಿಗೆ ಡಿಸೇಲ್ ಸಬ್ಸಿಡಿ ದೊರಕಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಅಡಿಕೆ ಬೆಳೆಗಾರರಿಗೆ ಗೋರಖ್ನಾಥ್ ಸಮಿತಿ ರಚಿಸಿ ಅಡಿಕೆ ಬೆಳೆಗೆ ಉತ್ತಮ ಬೆಲೆ ದೊರಕಲು ಶ್ರಮಿಸಿದ್ದೇನೆ. ಮತ್ತೊಮ್ಮೆ ಸಂಸದನಾಗಿ ಆಯ್ಕೆಯಾದರೆ ಜನರಿಗೆ ಸದಾ ಸ್ಪಂದಿಸವ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸಲಿದ್ದೇನೆ,
ಜನರನ್ನು ಸಂಪರ್ಕಸಿವುದು ಜನಪ್ರತಿನಿಧಿಯ ಕೆಲಸವಾಗಿದ್ದು, ಬಿಜೆಪಿಯವರಿಗೆ ಮತ ಕೇಳುವುದಕ್ಕೆ ಯಾವುದೇ ಸಾಧನೆಗಳಿಲ್ಲ ಆದರೆ ನಮಗೆ ರಾಜ್ಯಸರಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ವಿಚಾರವನ್ನು ಮುಂದಿಟ್ಟುಕೊಂಡು ಮತಕೇಳಲು ಅವಕಾಶವಿದೆ ಎಂದರು
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯತಂತ್ರ ರೂಪಿಸಲು ಹಾಗೂ ಕಾಂಗ್ರೆಸ್ ಪಕ್ಷದ ಗೆಲುವಿಗೆ ಪ್ರಮುಖ ಮಾಹಿತಿಯನ್ನು ಹಾಗೂ ಕಾಂಗ್ರೆಸ್ ಪಕ್ಷದ ಸಾಧನೆಯನ್ನು ಜನರಿಗೆ ಮನವರಿಕೆ ಮಾಡಲು ಕರೆ ನೀಡಿದರು.
ಈ ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಏ ಗಫೂರ್, ಕೆ.ಪಿ.ಸಿ.ಸಿ ವಕ್ತಾರರಾದ ಸುಧೀರ್ ಕುಮಾರ್ ಮುರೋಳ್ಳಿ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೀತಾ ವಾಘ್ಲೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ನಾಯಕರಾದ ದಿನೇಶ್ ಪುತ್ರನ್, ಉಡುಪಿ ವಿಧಾನಸಭಾ ಕ್ಷೇತ್ರ ಉಸ್ತುವಾರಿಗಳಾದ ವೈ ಸುಕುಮಾರ್, ನಾಯಕರಾದ ಪ್ರಸಾದ್ರಾಜ್ ಕಾಂಚನ್, ಮುರಳಿ ಶೆಟ್ಟಿ, ದಿವಾಕರ್ ಕುಂದರ್, ದೀಪಕ್ ಕೋಟ್ಯಾನ್, ಕಿರಣ್ ಹೆಗ್ಡೆ, ಹರೀಶ್ ಕಿಣಿ, ಸೌರಭ್ ಬಲ್ಲಾಳ್, ಪ್ರಖ್ಯಾತ್ ಶೆಟ್ಟಿ, ಶೇಖ್ ವಾಹೀದ್, ಮಾರ್ಕ್ ಸಲ್ದಾಹ್ನ, ಮಮತಾ ಶೆಟ್ಟಿ, ಪ್ರಶಾಂತ್ ಪೂಜಾರಿ, ರೋಶನ್ ಶೆಟ್ಟಿ, ಗಣೇಶ್ ನೆರ್ಗಿ, ರವಿರಾಜ್ ರಾವ್, ಸುರೇಶ್ ಶೆಟ್ಟಿ ಬನ್ನಂಜೆ, ಸುರಜ್ ಕರ್ಕೇರ, ಪ್ರವೀಣ್ ಜಿ ಕೊಡವೂರು, ಕೃಷ್ಣಮೂರ್ತಿ ಆಚಾರ್ಯ, ಕುಶಲ್ ಶೆಟ್ಟಿ, ನರಸಿಂಹಮೂರ್ತಿ, ನಾಸಿರ್ ಯಾಕೂಬ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಗರಸಭಾ ಸದಸ್ಯರು, ಮುಂಚೂಣಿ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು…💐
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಕಾರ್ಯಕ್ರಮ ಸ್ವಾಗತಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಮಾರ್ ಮಂಚಿ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಕ್ತಾರರಾದ ಸತೀಶ್ ಕೊಡವೂರು ಅವರು ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷರಾದ ಗಣೇಶ್ ನೆರ್ಗಿ ಅವರು ಕಾರ್ಯಕ್ರಮ ವಂದಿಸಿದರು