ಬಿಜೆಪಿ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿ ಅವ್ಯವಹಾರ: ಗೂಳಿಹಟ್ಟಿ ಶೇಖರ್

Spread the love

ಬಿಜೆಪಿ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿ ಅವ್ಯವಹಾರ: ಗೂಳಿಹಟ್ಟಿ ಶೇಖರ್

ಚಿತ್ರದುರ್ಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಬೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರು ಗುರುವಾರ ಗಂಭೀರ ಆರೋಪ ಮಾಡಿದ್ದಾರೆ.

ಹಿಂದೆ ಸಮಾಜ ಕಲ್ಯಾಣ ಸಚಿವರಾಗಿದ್ದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ನೂರಾರು ಕೋಟಿ ರೂ. ಲಂಚ ಸಂದಾಯವಾಗಿದೆ ಎಂದು ವಾಯ್ಸ್ ಮೆಸೇಜ್ ಮೂಲಕ ಗೂಳಿಹಟ್ಟಿ ಶೇಖರ್ ಆರೋಪ ಮಾಡಿದ್ದಾರೆ.

13 ನಿಮಿಷಗಳ ವಾಯ್ಸ್ ಮೆಸೇಜ್ ಬಿಡುಗಡೆ ಮಾಡಿರುವ ಗೂಳಿಹಟ್ಟಿ ಶೇಖರ್, ಉಡುಪಿ-ಚಿಕ್ಕಮಗಳೂರು ನೂತನ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಸಚಿವರಾಗಿದ್ದಾಗ ಹಗರಣ ನಡೆದಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಬೋವಿ ನಿಗಮದ ಹಗರಣವನ್ನು ಸಿಐಡಿ ತನಿಖೆಗೆ ನೀಲಾಗಿದೆ. ಪ್ರಕರಣ ಸಂಬಂಧ ಇಬ್ಬರ ಕೊಲೆ ಆಗಿದೆ ಎಂದು ಗೂಳಿಹಟ್ಟಿ ಶೇಖರ್ ಆರೋಪ ಮಾಡಿದ್ದಾರೆ.

ಸಿಬಿಐ ತನಿಖೆ ಬೇಡ, ಹಾಲಿ ಜಡ್ಜ್ ನೇತೃತ್ವದಲ್ಲಿ ತನಿಖೆ ಮಾಡಿಸಿ. ಕೋಟ ಶ್ರೀನಿವಾಸ್ ಪೂಜಾರಿಯಂಥ ಪ್ರಾಮಾಣಿಕರು ದೇಶದಲ್ಲಿಲ್ಲ. ಈಗ 50-60 ಕೋಟಿ ಆಸ್ತಿ ಎಲ್ಲಿಂದ ಬಂತು? ಎಸ್​​ಟಿ ನಿಗಮ, ಬೋವಿ ನಿಗಮ ಎಲ್ಲ ಹಗರಣಗಳ ಬಗ್ಗೆ ತನಿಖೆ ಮಾಡಿ. ಸಿದ್ದರಾಮಯ್ಯ ಸಿಎಂ ಆದ ಬಳಿಕ ತನಿಖೆ ಸ್ಥಗಿತ ಆಗಿದೆ. ಬಿಎಸ್ ಯಡಿಯೂರಪ್ಪ ಕೇಸ್ ತನಿಖೆ ಮಾಡದೆ ಯಾಕೆ ಮುಚ್ಚಿ ಹಾಕಿದ್ರಿ? ದೂರುದಾರ ಮಹಿಳೆ ಸಾವಿಗೀಡಾದ ಸುದ್ದಿ ಎಲ್ಲೆಡೆ ಬಂದಿದೆ. ಪ್ರಜ್ವಲ್ ಕೇಸ್ ಮಾತ್ರ ತನಿಖೆ ಮಾಡ್ತೀರಾ ಎಂದು ಗೂಳಿಹಟ್ಟಿ ಶೇಖರ್​​ ಕಿಡಿ ಕಾರಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments