Home Mangalorean News Kannada News ಬಿಜೆಪಿ ತನ್ನ ಖಜಾನೆ ತುಂಬಿಸಿಕೊಂಡು ಕಾಂಗ್ರೆಸ್ ನ ಖಾತೆಗಳನ್ನು ರದ್ದುಪಡಿಸಿದೆ: ಕಾಂಗ್ರೆಸ್ ಆರೋಪ

ಬಿಜೆಪಿ ತನ್ನ ಖಜಾನೆ ತುಂಬಿಸಿಕೊಂಡು ಕಾಂಗ್ರೆಸ್ ನ ಖಾತೆಗಳನ್ನು ರದ್ದುಪಡಿಸಿದೆ: ಕಾಂಗ್ರೆಸ್ ಆರೋಪ

Spread the love

ಬಿಜೆಪಿ ತನ್ನ ಖಜಾನೆ ತುಂಬಿಸಿಕೊಂಡು ಕಾಂಗ್ರೆಸ್ ನ ಖಾತೆಗಳನ್ನು ರದ್ದುಪಡಿಸಿದೆ: ಕಾಂಗ್ರೆಸ್ ಆರೋಪ

ನವದೆಹಲಿ: ಬಿಜೆಪಿ ತಪ್ಪಾಗಿ ದೇಣಿಗೆ ಪಡೆದು ತನ್ನ ಬೊಕ್ಕಸ ತುಂಬಿಕೊಂಡಿದ್ದು, ಇದೀಗ ಕಾಂಗ್ರೆಸ್ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಈಗ ಕಾಂಗ್ರೆಸ್ ಚುನಾವಣೆ ಎದುರಿಸುವ ಬಿಕ್ಕಟ್ಟು ಎದುರಿಸುತ್ತಿದೆ. ಪ್ರಚಾರಕ್ಕಾಗಿ ನಮ್ಮ ಬಳಿ ಹಣವಿಲ್ಲ. ಸೀತಾರಾಮ್ ಕೇಸರಿ ಅವರ ಕಾಲದ ನಿಧಿಗೆ ಸಂಬಂಧಿಸಿದಂತೆ ನಮಗೆ ನೋಟಿಸ್ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪತ್ರಿಕಾಗೋಷ್ಠಿ ನಡೆಸಿತು. ಐಟಿಯಂತಹ ಸಾಂವಿಧಾನಿಕ ಹಾಗೂ ನ್ಯಾಯಾಂಗ ಸಂಸ್ಥೆಗಳ ಮೇಲೆ ಆಡಳಿತ ಪಕ್ಷವು ನೇರ ಅಥವಾ ಪರೋಕ್ಷ ನಿಯಂತ್ರಣವನ್ನು ಹೊಂದಿರಬಾರದು ಎಂದಿದ್ದಾರೆ.

ಷಡ್ಯಂತ್ರದ ಭಾಗವಾಗಿ ಪ್ರಮುಖ ವಿರೋಧ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದ್ದು, ಹಣದ ಕೊರತೆಯಿಂದ ಚುನಾವಣೆಗೆ ಸ್ಪರ್ಧಿಸಲು ಸಮಾನ ಅವಕಾಶ ಸಿಗುವುದಿಲ್ಲ ಎಂದು ಖರ್ಗೆ ಹೇಳಿದರು. ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಬೇಕಾದರೆ ಸಮತಟ್ಟಾದ ಮೈದಾನ ನಿರ್ಮಾಣವಾಗಬೇಕು.

ಸಾಂವಿಧಾನಿಕ ಸಂಸ್ಥೆಗಳು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಬಯಸಿದರೆ, ನಮ್ಮ ಬ್ಯಾಂಕ್ ಖಾತೆಗಳನ್ನು ಮುಕ್ತವಾಗಿ ಪ್ರವೇಶಿಸಲು ಅವಕಾಶ ನೀಡಬೇಕು ಎಂದು ಖರ್ಗೆ ಹೇಳಿದರು. ಯಾವುದೇ ರಾಜಕೀಯ ಪಕ್ಷಗಳು ಆದಾಯ ತೆರಿಗೆ ವ್ಯಾಪ್ತಿಗೆ ಬರುವುದಿಲ್ಲ ಎಂದರು.

ದುರದೃಷ್ಟವಶಾತ್ ಇತ್ತೀಚೆಗೆ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಿದ ನಂತರ ಚುನಾವಣಾ ಬಾಂಡ್ಗಳಿಗೆ ಸಂಬಂಧಿಸಿದಂತೆ ಹೊರಬಿದ್ದಿರುವ ಸಂಗತಿಗಳು ಆತಂಕಕಾರಿ ಹಾಗೂ ನಾಚಿಕೆಗೇಡಿನ ಅಂಗತಿಯಾಗಿದೆ ಎಂದು ಅವರು ಹೇಳಿದರು. ಇದು ದೇಶದ ಪ್ರತಿಷ್ಠೆಗೆ ಧಕ್ಕೆ ತಂದಿದೆ, 70 ವರ್ಷಗಳಲ್ಲಿ ನಮ್ಮ ದೇಶದಲ್ಲಿ ನಿರ್ಮಿಸಲಾದ ನ್ಯಾಯಯುತ ಚುನಾವಣೆ ಹಾಗೂ ಆರೋಗ್ಯಕರ ಪ್ರಜಾಪ್ರಭುತ್ವದ ಚಿತ್ರವನ್ನು ಪ್ರಶ್ನೆ ಮಾಡಲಾಗುತ್ತಿದೆ.


Spread the love

Exit mobile version