Home Mangalorean News Kannada News ಬಿಜೆಪಿ 2ನೇ ಪಟ್ಟಿ ರಿಲೀಸ್: ಉಡುಪಿ-ಚಿಕ್ಕಮಗಳೂರು ಕೋಟ, ಮಂಗಳೂರಿಗೆ ಕ್ಯಾ. ಬ್ರಜೇಶ್ ಚೌಟ

ಬಿಜೆಪಿ 2ನೇ ಪಟ್ಟಿ ರಿಲೀಸ್: ಉಡುಪಿ-ಚಿಕ್ಕಮಗಳೂರು ಕೋಟ, ಮಂಗಳೂರಿಗೆ ಕ್ಯಾ. ಬ್ರಜೇಶ್ ಚೌಟ

Spread the love

ಬಿಜೆಪಿ 2ನೇ ಪಟ್ಟಿ ರಿಲೀಸ್: ಉಡುಪಿ-ಚಿಕ್ಕಮಗಳೂರು ಕೋಟ, ಮಂಗಳೂರಿಗೆ ಕ್ಯಾ. ಬ್ರಜೇಶ್ ಚೌಟ

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ 20 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್‌ ಮಾಡಲಾಗಿದೆ. ನಿರೀಕ್ಷೆಯಂತೆ ಮೈಸೂರಿನಿಂದ ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್‌ ಆಗಿದೆ. ಕರ್ನಾಟಕದ ಒಟ್ಟು 20 ಕ್ಷೇತ್ರಗಳಿಗೆ ಟಿಕೆಟ್‌ ಮಿಸ್‌ ಆಗಿದೆ. ಬಿಜೆಪಿಯ ಒಟ್ಟು 8 ಹಾಲಿ ಸದಸ್ಯರಿಗೆ ಈ ಬಾರಿ ಟಿಕೆಟ್‌ ತಪ್ಪಿದೆ. ಪ್ರತಾಪ್‌ ಸಿಂಹ, ಡಿವಿ ಸದಾನಂದ ಗೌಡ, ಕರಡಿ ಸಂಗಣ್ಣ, ಶಿವಕುಮಾರ್‌ ಉದಾಸಿ, ಜಿಎಸ್‌ ಬಸವರಾಜು ಅವರಿಗೆ ಟಿಕೆಟ್‌ ತಪ್ಪಿದೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಿಜೆಪಿ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಯಾರು ನಾಯಕರಾಗುತ್ತಾರೆ ಎಂಬ ಬಗ್ಗೆ ತೀರ್ಮಾನ ಮಾಡಲಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿ ಟಿಕೆಟ್‌ಗಳ ಕ್ಷೇತ್ರವನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಪ್ರಮುಖವಾಗಿ ತುಮಕೂರು ಕ್ಷೇತ್ರದಿಂದ ವಿ. ಸೋಮಣ್ಣ ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 2ನೇ ಪಟ್ಟಿಯಲ್ಲಿ ಲೋಕಸಭೆಗೆ ಒಟ್ಟು 72 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದೆ.

ಬಿಜಾಪುರ- ರಮೇಶ್ ಜಿಗಜಿಣಗಿ
ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟೆ- ಪಿ.ಸಿ. ಗದ್ದಿಗೌಡರ
ಕಲಬುರಗಿ- ಉಮೇಶ್ ಜಾಧವ್
ಬೀದರ್- ಭಗವಂತ ಖೂಬಾ
ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್
ಬಳ್ಳಾರಿ- ಶ್ರೀರಾಮುಲು
ಹಾವೇರಿ- ಬಸವರಾಜ ಬೊಮ್ಮಾಯಿ
ಧಾರವಾಡ- ಪ್ರಹ್ಲಾದ್ ಜೋಶಿ
ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ- ಬಿ.ವೈ. ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ
ತುಮಕೂರು – ವಿ. ಸೋಮಣ್ಣ
ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಚಾಮರಾಜನಗರ- ಎಸ್. ಬಸವರಾಜು
ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ

ಬಿಜೆಪಿಯ 9 ಸಂಸದರಿಗೆ ಟಿಕೆಟ್ ಮಿಸ್ ಆಗಿದೆ. ನಳಿನ್ ಕುಮಾರ್‌ ಕಟೀಲ್‌ಗೆ ದಕ್ಷಿಣ ಕನ್ನಡ, ಮೈಸೂರು ಕೊಡಗು ಕ್ಷೇತ್ರದಿಂದ ಪ್ರತಾಪ್‌ ಸಿಂಹ, ಕೊಪ್ಪಳದಿಂದ ಕರಡಿ ಸಂಗಣ್ಣ, ಬೆಂಗಳೂರು ಉತ್ತರದಿಂದ ಸದಾನಂದ ಗೌಡ, ಬಳ್ಳಾರಿಯಲ್ಲಿ ದೇವೇಂದ್ರಪ್ಪ ಅವರಿಗೆ ಟಿಕೆಟ್‌ ನಿರಾಕರಿಸಲಾಗಿದ್ದರೆ, ಚಾಮರಾಜನಗರದಲ್ಲಿ ಶ್ರೀನಿವಾಸ್‌ ಪ್ರಸಾದ್‌, ಹಾವೇರಿಯಲ್ಲಿ ಸಿಎಂ ಉದಾಸಿ, ತುಮಕೂರಿನಲ್ಲಿ ಜಿಎಸ್‌ ಬಸವರಾಜ್‌ ಹಾಗೂ ದಾವಣಗೆರೆಯಲ್ಲಿ ಜಿಎಂ ಸಿದ್ಧೇಶ್ವರ ನಿವೃತ್ತಿ ಘೋಷಣೆ ಮಾಡಿರುವ ಕಾರಣ ಬೇರೆಯವರಿಗೆ ಟಿಕೆಟ್‌ ನೀಡಲಾಗಿದೆ.


Spread the love

Exit mobile version