Home Mangalorean News Kannada News ಬಿಡುವಿಲ್ಲದ ಸಮಯದಲ್ಲೂ ಜೊತೆಯಾಗಿ ಕ್ರೀಡಾಕೂಟದಲ್ಲಿ ಭಾಗವಹಿಸಿದ ಉಡುಪಿ ಜಿಲ್ಲಾ ಪತ್ರಕರ್ತರು

ಬಿಡುವಿಲ್ಲದ ಸಮಯದಲ್ಲೂ ಜೊತೆಯಾಗಿ ಕ್ರೀಡಾಕೂಟದಲ್ಲಿ ಭಾಗವಹಿಸಿದ ಉಡುಪಿ ಜಿಲ್ಲಾ ಪತ್ರಕರ್ತರು

Spread the love

ಬಿಡುವಿಲ್ಲದ ಸಮಯದಲ್ಲೂ ಜೊತೆಯಾಗಿ ಕ್ರೀಡಾಕೂಟದಲ್ಲಿ ಭಾಗವಹಿಸಿದ ಉಡುಪಿ ಜಿಲ್ಲಾ ಪತ್ರಕರ್ತರು

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟ ಜರುಗಿತು.

ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಬಡಗಬೆಟ್ಟು ಕೋಅಪರೇಟಿವ ಸೊಸೈಟಿ ಪ್ರಧಾನ ವ್ಯವಸ್ಥಾಪಕ ಇಂದ್ರಾಳಿ ಜಯಕರ ಶೆಟ್ಟಿ ಮಾತನಾಡಿ, ಪ್ರತಿನಿತ್ಯ ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರು ಕ್ರಿಡೇಯಲ್ಲಿ ತೊಡಗಿಸುವುದು ಅತಿ ಅಗತ್ಯ. ಇದರಿಂದ ಮಾನಸಿಕ ಹಾಗೂ ದೈಹಿಕವಾಗಿಯೂ ವ್ಯಾಯಾಮ ದೊರೆಯುತ್ತದೆ ಎಂದರು.

ದಕ ಮತ್ತು ಉಡುಪಿ ಜಿಲ್ಲಾ ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಮಾತನಾಡಿ ಪತ್ರಕರ್ತರು ಸಮಾಜದ ಸಮಸ್ಯೆಗಳಿಗೆ ತಮ್ಮ ಹರಿತವಾದ ವರದಿಗಳ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ಜಿಲ್ಲೆಯ ಪತ್ರಕರ್ತರೆಲ್ಲ ಒಂದಾಗಿ ಕ್ರೀಡಾಕೂಟ ಏರ್ಪಡಿಸುವ ಮೂಲಕ ಕ್ರೀಡಾ ಸ್ಪೂರ್ತಿ ಮೆರೆದಿದ್ದಾರೆ ಎಂದರು.

400 ಮೀಟರ್ ಕ್ರೀಡಾಕೂಟಕ್ಕೆ ಚಾಲನೆ ನೀಡುವ ಮೂಲಕ ಉಡುಪಿ ಶಾಸಕ ರಘುಪತಿ ಭಟ್ ಚಾಲನೆ ನೀಡಿ ಪತ್ರಕರ್ತರ ಕ್ರೀಡಾಕೂಟಕ್ಕೆ ಶುಭಹಾರೈಸಿದರು.

ಜಿಲ್ಲಾ ಪ್ರಭಾರ ವಾರ್ತಾಧಿಕಾರಿ ಖಾದರ್ ಶಾ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಕ್ರೀಡಾ ಕಾರ್ಯದರ್ಶಿ ಹರೀಶ್ ಪಾಲೇಚ್ಚಾರ್, ಪ್ರೆಸ್ ಕ್ಲಬ್ ಸಂಚಾಲಕ ನಾಗರಾಜ್ ರಾವ್ ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ ಪಾಂಡೇಲು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಸಂತೋಷ್ ಸರಳೇಬೆಟ್ಟು ವಂದಿಸಿದರು. ಕೋಶಾಧಿಕಾರಿ ದಿವಾಕರ್ ಹಿರಿಯಡ್ಕ ಕಾರ್ಯಕ್ರಮ ನಿರೂಪಿಸಿದರು.

ಬಳಿಕ ಪತ್ರಕರ್ತರಿಗಾಗಿ ಮಡಕೆ ಒಡೆಯುವ ಸ್ಪರ್ಧೆ, ಓಟ, ಗೋಣಿ ಚೀಲ ಓಟ, ಶಾಟ್ ಪುಟ್, ಉದ್ದ ಜಿಗಿತ, ರಿಲೆ, ವಾಲಿಬಾಲ್, ಹಗ್ಗ ಜಗ್ಗಾಟ, ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.


Spread the love

Exit mobile version