Home Mangalorean News Kannada News ಬೆಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಒಂಟಿಯಾಗಿ ನೆಲೆಸಿದ್ದ ಮಹಿಳಾ ಅಧಿಕಾರಿ ಬರ್ಬರ ಕೊಲೆ, ಪೊಲೀಸರಿಂದ ತೀವ್ರ...

ಬೆಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಒಂಟಿಯಾಗಿ ನೆಲೆಸಿದ್ದ ಮಹಿಳಾ ಅಧಿಕಾರಿ ಬರ್ಬರ ಕೊಲೆ, ಪೊಲೀಸರಿಂದ ತೀವ್ರ ತನಿಖೆ

Spread the love
RedditLinkedinYoutubeEmailFacebook MessengerTelegramWhatsapp

ಬೆಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಒಂಟಿಯಾಗಿ ನೆಲೆಸಿದ್ದ ಮಹಿಳಾ ಅಧಿಕಾರಿ ಬರ್ಬರ ಕೊಲೆ, ಪೊಲೀಸರಿಂದ ತೀವ್ರ ತನಿಖೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೈಪ್ರೊಫೈಲ್ ಅಪರಾಧ ಕೃತ್ಯವೊಂದು ಬೆಳಕಿಗೆ ಬಂದಿದೆ. ಗಣಿ-ಭೂವಿಜ್ಞಾನ ಇಲಾಖೆಯ ಅಧಿಕಾರಿಯ ಮನೆಗೆ ದುಷ್ಕರ್ಮಿಗಳು ನುಗ್ಗಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಈ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಣಿ-ಭೂವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ (37ವ) ಕೊಲೆಯಾದ ಅಧಿಕಾರಿ.

ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‌ ನಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಅಧಿಕಾರಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಬಂದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಂಗಳೂರಿನ ಗ್ರಾಮಾಂತರ ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರತಿಮಾ ದೊಡ್ಡಕಲ್ಲಸಂದ್ರದ ಕುವೆಂಪು ನಗರದಲ್ಲಿ ಒಂಟಿಯಾಗಿ ವಾಸವಾಗಿದ್ದರು. ಪತಿ ಮತ್ತು ಮಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನೆಲೆಸಿದ್ದಾರೆ. ಕಳೆದ ರಾತ್ರಿ ಈ ಕೃತ್ಯ ನಡೆದಿದೆ.

ನಡೆದ ಘಟನೆಯೇನು?: ನಿನ್ನೆ ಶನಿವಾರ ರಾತ್ರಿ 8 ಗಂಟೆಗೆ ಪ್ರತಿಮಾ ಅವರನ್ನು ಕಛೇರಿಯಿಂದ ಮನೆಗೆ ಚಾಲಕ ಡ್ರಾಪ್‌ ಮಾಡಿ ತೆರಳಿದ ಬಳಿಕ ಹಂತಕರು ಬಂದು ಕೊಲೆ ಮಾಡಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಮನೆಯ ಒಳಗೆ ಬಂದು ಕೊಲೆ ಮಾಡಿ ಹೋಗಿರುವ ಕಾರಣ ಮೇಲ್ನೋಟಕ್ಕೆ ಇದು ಪಕ್ಕಾ ಯೋಜಿತ ಕೃತ್ಯವಾಗಿದ್ದು ಪರಿಚಿತರೇ ಇದನ್ನು ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ರಾತ್ರಿ ಪ್ರತಿಮಾ ಅವರಿಗೆ ಅವರ ಅಣ್ಣ ಕರೆ ಮಾಡಿದ್ದ, ಆದರೆ ಕರೆ ಸ್ವೀಕರಿಸಿರಲಿಲ್ಲ. ಬೆಳಿಗ್ಗೆ ಮನೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾವುದೇ ವಸ್ತುಗಳು ಕಾಣೆಯಾಗಿಲ್ಲ. ಹೀಗಾಗಿ ಇದೊಂದು ಪೂರ್ವ ನಿಯೋಜಿತ ಹತ್ಯೆ ಎಂಬುದು ಸ್ಪಷ್ಟವಾಗಿದೆ. ಪರಿಚಿತರಿಂದಲೇ ಕೊಲೆಯಾಗಿರುವ ಅನುಮಾನ ಇರುವ ಹಿನ್ನೆಲೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮನೆಯಲ್ಲಿ ಡಿಸಿಪಿ ರಾಹುಲ್ ಶಹಪುರವಾಡ್ ಪರಿಶೀಲನೆ ನಡೆಸಿದ್ದಾರೆ.

ಒಂಟಿಯಾಗಿ ವಾಸಿಸುತ್ತಿದ್ದ ಪ್ರತಿಮಾ: ಪ್ರತಿಮಾ ಅವರ ಪತಿ ಮತ್ತು ಮಗ ತೀರ್ಥಹಳ್ಳಿಯ ತುಡುಕಿ ಗ್ರಾಮದಲ್ಲಿ ವಾಸವಿದ್ದಾರೆ. 18 ವರ್ಷಗಳ ಹಿಂದೆ ಪ್ರತಿಮಾ ಹಾಗೂ ಸತ್ಯನಾರಾಯಣ ವಿವಾಹವಾಗಿದ್ದರು. ಮದುವೆಯಾದ ಸ್ವಲ್ಪ ದಿನಗಳಲ್ಲೇ ಪ್ರತಿಮಾಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನೌಕರಿ ಸಿಕ್ಕಿತು. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವರ್ಗವಾಗಿದ್ದರು. ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಇವರಿಗೆ 15 ವರ್ಷದ ಎಸ್ ಎಸ್ ಎಲ್ ಸಿ ಓದುವ ಮಗನಿದ್ದಾನೆ.


Spread the love

Exit mobile version