Home Mangalorean News Kannada News ಬೆಂಗಳೂರು: ಮಾಜಿ ಐ.ಪಿ.ಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆ!

ಬೆಂಗಳೂರು: ಮಾಜಿ ಐ.ಪಿ.ಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆ!

Spread the love
RedditLinkedinYoutubeEmailFacebook MessengerTelegramWhatsapp

ಬೆಂಗಳೂರು: ಮಾಜಿ ಐ.ಪಿ.ಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆ!

ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಮಂಗಳವಾರ ಮಧ್ಯಾಹ್ನ ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಖಚಿತಪಡಿಸಿರುವ ವೈದ್ಯಕೀಯ ಸಚಿವ ಕೆ. ಸುಧಾಕರ್, ಕರ್ನಾಟಕ ಕೇಡರ್ನ ನಿವೃತ್ತಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ.

ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ.ಅವರಿಗೆ ಹೃದಯಪೂರ್ವಕ ಸ್ವಾಗತ ಎಂದಿದ್ದಾರೆ.

ಬಿಜಿಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಣ್ಣಾಮಲೈ ಅವರು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ. ಈ ಮೂಲಕ ರಾಜಕೀಯ ಜೀವನ ಆರಂಭಿಸಲಿದ್ದಾರೆ.

ಐಪಿಎಸ್ ಅಧಿಕಾರಿಯಾಗಿ ಉನ್ನತ ಹುದ್ದೆಗಳನ್ನು ನಿಭಾಯಿಸಿದ್ದ ಅಣ್ಣಾಮಲೈ ಅವರು ತಮ್ಮ ದಿಟ್ಟ ತನದಿಂದಲೇ ಖಡಕ್ ಅಧಿಕಾರಿಯೆಂಬ ಖ್ಯಾತಿಗಳಿಸಿದ್ದರು. ತಮ್ಮ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದು ಅಭಿಮಾನಿಗಳಿಗೆ ನೋವಾಗಿತ್ತು.


Spread the love
RedditLinkedinYoutubeEmailFacebook MessengerTelegramWhatsapp

Exit mobile version