ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧಿಕಾರ ಹಸ್ತಾಂತರ
ಉಡುಪಿ: ತೆಂಕನಿಡಿಯೂರು ಗ್ರಾಮದ ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಬುಧವಾರ ನಡೆಯಿತು.
ಗ್ರಾಮ ಆಡಳಿತಾಧಿಕಾರಿ ಶ್ರೀಮತಿ ಪವಿತ್ರ ಅವರು ಅಧಿಕಾರ ಹಸ್ತಾಂತರಿಸಿದರು. ಈ ನೂತನ ವ್ಯವಸ್ಥಾಪನಾ ಸಮಿತಿಯಲ್ಲಿ ಅಧ್ಯಕ್ಷರಾಗಿ ಪ್ರಖ್ಯಾತ್ ಶೆಟ್ಟಿ, ಪ್ರಧಾನ ಅರ್ಚಕರಾಗಿ ಗೋಪಾಲಕೃಷ್ಣ ಭಟ್, ಸದಸ್ಯರಾಗಿ ಭೋಜ ಶೆಟ್ಟಿ, ವೆಂಕಟೇಶ್ ಕುಲಾಲ್, ಪ್ರಭಾಕರ್ ಅಂಚನ್, ಸತೀಶ್, ಶ್ರೀಮತಿ ಮಮತಾ ಶೆಟ್ಟಿ ಹಾಗೂ ಶ್ರೀಮತಿ ಅನುಷಾ ಅವರು ಅಧಿಕಾರ ಸ್ವೀಕರಿಸಿದರು
ಈ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಉಪ್ಪೂರು ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ಸುವರ್ಣ, ತೆಂಕನಿಡಿಯೂರು ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಶ್ರೀಮತಿ ಶೋಭಾ ನಾಯ್ಕ್, ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಥ್ವಿರಾಜ್ ಶೆಟ್ಟಿ, ಸತೀಶ್ ನಾಯಕ್, ಸುರೇಶ್ ನಾಯಕ್, ಶರತ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಉದಯ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂಜಯ್ ಆಚಾರ್ಯ, ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸಜ್ಜನ್ ಶೆಟ್ಟಿ, ಶಿರೀಷ್ ಶೆಟ್ಟಿ, ತಕ್ಷಕ್ ಪೈ ಹಾಗೂ ಇನ್ನಿತರರು ಉಪಸ್ಥಿತರಿದ್ದು ನೂತನ ವ್ಯವಸ್ಥಾಪನಾ ಸಮಿತಿಯ ಎಲ್ಲರಿಗೂ ಶುಭ ಹಾರೈಸಿದರು