ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

Spread the love

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಸೋಮವಾರ ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಅವರ ಮೃತದೇಹವನ್ನು ಸ್ಥಳೀಯ ಈಜು ತಜ್ಞರ ಸಹಕಾರದೊಂದಿಗೆ ಹೊರತೆಗೆಯಲಾಗಿದೆ.

ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ನದಿಗೆ ಇಳಿದಿದ್ದು ಬಳಿಕ ನದಿ ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿ ಹುಡುಕಾಟ ನಡೆಸಿದ್ದರು, ಮುಳುಗು ತಜ್ಞ ಬೆಳ್ತಂಗಡಿ‌ಯ‌ ಸಂಜಯ ನಗರದ ಇಸ್ಮಾಯಿಲ್‌ ಹಾಗೂ ಇತರರು ಅಗ್ನಿಶಾಮಕದಳ ಸಹಕಾರದೊಂದಿಗೆ ನಡೆಸಿದ ನಿರಂತರ ಹುಡುಕಾಟದ ಬಳಿಕ ರಾತ್ರಿ‌11‌ರ‌ ಸುಮಾರಿಗೆ ನದಿ ನೀರಿನಿಂದ ಮೃತದೇಹವನ್ನು ಮೇಲೆತ್ತಿದ್ದಾರೆ.

ಪ್ರಸಾದ್ ಅವರು ಆರ್ ಎಸ್ ಎಸ್ ಪ್ರಚಾರಕರಾಗಿ ಕಳೆದ ಹಲವು ವರ್ಷ ಕಾರ್ಯ ನಿರ್ವಹಿಸಿ ಪ್ರಸ್ತುತ ಪುತ್ತೂರು ಜಿಲ್ಲಾ ಧರ್ಮಜಾಗರಣ ಜಿಲ್ಲಾ ಸಂಯೋಜಕರಾಗಿದ್ದರು.


Spread the love
Subscribe
Notify of

0 Comments
Inline Feedbacks
View all comments