ಬೈಂದೂರು: ಟಿಸಿ ನೀಡಲು ವಿಳಂಬ ಆರೋಪ: ವಿದ್ಯಾರ್ಥಿ ಆತ್ಮಹತ್ಯೆ
ಬೈಂದೂರು: ವರ್ಗಾವಣೆ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ ಕಾರಣಕ್ಕಾಗಿ ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ಶಿರೂರು ಗ್ರಾಮದ ಮೇಲ್ಪಂಕ್ತಿ ಎಂಬಲ್ಲಿ ಸೋಮವಾರ ನಡೆದಿದೆ.
ನಿತಿನ್ ಆಚಾರಿ(16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಬೈಂದೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿರುವ ಈತ, ಪ್ರಸ್ತುತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದು, ಸೋಮವಾರ ವರ್ಗಾವಣೆ ಪಡೆಯಲು ಶಾಲೆಗೆ ಹೋದಾಗ ಶಿಕ್ಷಕರು ಬೈದಿದ್ದಾರೆಂದು ಆರೋಪಿಸ ಲಾಗಿದೆ. ಇದೇ ಕಾರಣಕ್ಕೆ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಲಾಗಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.