ಬೈಕ್ ಮತ್ತು ಬಸ್ಸು ನಡುವೆ ಅಪಘಾತ – ಇಬ್ಬರ ಸಾವು
ಮಂಗಳೂರು: ಬೈಕ್ ಮತ್ತು ಬಸ್ಸು ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ಭಾನುವಾರ ನಡೆದಿದೆ.
ಮಂಗಳೂರು ಕುಡುಪು ನಿವಾಸಿ ಚರಣ್ (18) ಮತ್ತು ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ದಂಡೆಗೋಳಿ ನಿವಾಸಿ ಮಹಮದ್ ನೌಶಾದ್ (18) ಅಪಘಾತದಲ್ಲಿ ಮೃತಪಟ್ಟವರು.
ಬಿ.ಸಿ.ರೋಡಿನಿಂದ ಇತಿಹಾಸ ಪ್ರಸಿದ್ಧ ದೇವಸ್ಥಾನ ಕಾರಿಂಜ ದೇವಸ್ಥಾನದ ಕಡೆ ತೆರಳುತ್ತಿದ್ದ ವೇಳೆ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಸರಕಾರಿ ಬಸ್ ರಾಂಗ್ ಸೈಡ್ ಗೆ ಬಂದು ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯ ರಭಸಕ್ಕೆ ಬೈಕ್ ಸವಾರು ಬಸ್ ನ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಸ್ಥಳೀಯ ನಿವಾಸಿಗಳು ಹರಸಾಹಸ ಪಟ್ಟು ಬಸ್ ನಡಿಯಲ್ಲಿ ಸಿಲುಕಿ ಕೊಂಡು ಚಿಂತಾಜನಕ ಸ್ಥಿತಿಯಲ್ಲಿ ನರಳಾಡುತ್ತಿದ್ದ ಸವಾರರನ್ನು 108 ಅಂಬ್ಯುಲೆನ್ಸ್ ಮೂಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಗಂಭೀರ ಸ್ವರೂಪದ ಗಾಯಗೊಂಡ ಇವರು ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ.
ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.