ಬೈಕ್ ಸ್ಕಿಡ್ ಆಗಿ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

Spread the love

ಬೈಕ್ ಸ್ಕಿಡ್ ಆಗಿ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಕಾರ್ಕಳ: ಬೈಕ್ ಸ್ಕಿಡ್ ಆದ ಪರಿಣಾಮ ಇಂಜಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡ ಘಟನೆ ಅತ್ತೂರು ಪರ್ಪಲೆ ಬಳಿ ಗುರುವಾರ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಬ್ರಹ್ಮಾವರ ಮೂಲದ ಆಕಾಶ್ ಕಾಂಚನ್ (18) ಎಂದು ಗುರುತಿಸಲಾಗಿದೆ. ಮೃತ ಆಕಾಶ್ ನಿಟ್ಟೆಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಮೆಕ್ಯಾನಿಕಲ್ ವಿದ್ಯಾರ್ಥಿಯಾಗಿದ್ದನು.

ಪೊಲೀಸ್ ಮೂಲಗಳ ಪ್ರಕಾರ ಗುರುವಾರ ಕಾಲೇಜಿನಲ್ಲಿ ವಾರ್ಷಿಕೋತ್ಸವ ಇದ್ದ ಕಾರಣದಿಂದ ಆಕಾಶ್ ಕಾಂಚನ್ ಹಾಗೂ ಆತನ ಗೆಳೆಯರು ಬೇರೆ ಬೇರೆ ಬೈಕಿನಲ್ಲಿ ಕಾರ್ಕಳ ಬಂದು ಮರಳಿ ಕಾಲೇಜಿಗೆ ಹೋಗುವಾಗ ಪರ್ಪಲೆ ಗುಡ್ಡದ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿದ್ದು ಆಕಾಶ್ ಕಾಂಚನ್ ಹಾಗೂ ಸಹ ಸವಾರ ರಸ್ತೆಗೆ ಬಿದ್ದಿದ್ದು, ಆಕಾಶ್ ಸ್ಥಳದಲ್ಲೇ ಮೃತಪಟ್ಟಿದ್ದು ಸಹಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love