ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಆರೋಗ್ಯ ಹಸ್ತ ಕಾರ್ಯಕರ್ತರಿಗೆ ಆರೋಗ್ಯ ಕಿಟ್ ವಿತರಣೆ
ಉಡುಪಿ: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಕ್ಷದ ಆರೋಗ್ಯ ಹಸ್ತ ಕಾರ್ಯಕರ್ತರಿಗೆ ಆರೋಗ್ಯ ಕಿಟ್ ಅನ್ನು ನೀಡುವ ಹಾಗೂ ಅವರ ಕರ್ತವ್ಯದ ಬಗ್ಗೆ ಮಾಹಿತಿ ಕೊಡುವ ಕಾರ್ಯಾಗಾರ ಶುಕ್ರವಾರ ಜರಗಿತು.
ಈ ವೇಳೆ ಮಾತನಾಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಪಕ್ಷದ ಕೋರೋನಾ ವಾರಿಯರ್ಸ್ ಕಾರ್ಯಕರ್ತರು ಮನೆ ಮನೆಗೆ ಬೇಟಿ ಕೊಟ್ಟು ತಮ್ಮ ತಮ್ಮ ವಾರ್ಡ್ಗಳಲ್ಲಿ ಜನರ ಆರೋಗ್ಯವನ್ನು ವಿಚಾರಿಸಿ ಕೋವಿಡ್-19 ಬಗ್ಗೆ ಜಾಗೃತಿಯ ಕರಪತ್ರವನ್ನು ನೀಡಿ ಜ್ವರ ಇದ್ದವರನ್ನು ವೈದ್ಯರನ್ನು ಸಂಪರ್ಕಿಸುವಂತೆ ಮಾಹಿತಿ ನೀಡಿ ಜನ ಜಾಗ್ರತಿಗೊಳಿಸಬೇಕಾಗಿ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ವೀಕ್ಷಕರಾದ ಪುರುಷೋತ್ತಮ ಚಿತ್ರ ಬೈಲು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವೀಕ್ಷಕರಾದ ಪ್ರಖ್ಯಾತ್ ಶೆಟ್ಟಿ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ಕೆಪಿಸಿಸಿ ಸದಸ್ಯೆ ವೆರೋನಿಕಾ ಕರ್ನೆಲಿಯೊ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರಾದ ಕೀರ್ತಿ ಶೆಟ್ಟಿ, ಡಾ|ಸುನೀತಾ ಶೆಟ್ಟಿ, ರೋಶನಿ ಓಲಿವರ್, ಡಾ|ಗೋಪಾಲ ಪೂಜಾರಿ, ದಿನಕರ್ ಹೇರೂರು, ರಾಜೇಶ್ ಶೆಟ್ಟಿ, ನಿತ್ಯಾನಂದ ಕೆಮ್ಮಣ್ಣು, ರಘುರಾಮ್ ಶೆಟ್ಟಿ, ವೆಂಕಟೇಶ್ ಸುವರ್ಣ, ಹರೀಶ್ ಕೀಳಿಂಜೆ, ಉಮೇಶ್ ಶೆಟ್ಟಿ, ಮಹೇಶ್ ಮೊಯ್ಲಿ, ಸತೀಶ್ ಸಾಲಿಯಾನ್, ಪ್ರಶಾಂತ್ ಪೂಜಾರಿ, ಹರೀಶ್ ಶೆಟ್ಟಿ, ವಿವೇಕ್ ಶೆಟ್ಟಿ, ತಾಜುದ್ದೀನ್, ಸಂಪತ್ ಗುಜ್ಜರಬೆಟ್ಟು, ರಕ್ಷೀತ್, ಹರೀಶ್, ಶಬರೀಶ್, ಗುರುರಾಜ್ ಕುಮಾರ್ ಹಾರಾಡಿ, ಮೆಲ್ಕೋನ್ ಮೊಂತೆರೋ, ಮಹ್ಮದ್ ರಿಯಾಜ್ ಹಾಗೂ ಇತರರು ಉಪಸ್ಥಿತರಿದ್ದರು.