Spread the love
ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಘವೇಂದ್ರ ಶೆಟ್ಟಿ ನೇಮಕ
ಉಡುಪಿ: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಘವೇಂದ್ರ ಶೆಟ್ಟಿ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ರಾಘವೇಂದ್ರ ಶೆಟ್ಟಿ ಕರ್ಜೆ ಅವರು ಕರ್ಜೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾಗಿ, ಪಂಚಾಯತ್ ಸದಸ್ಯರಾಗಿ ಉತ್ತಮ ಜನಸೇವೆ ಸಲ್ಲಿಸಿ ಎನ್.ಎಸ್.ಯು.ಐ’ನ ಸದಸ್ಯರಾಗಿ, ಬ್ರಹ್ಮಾವರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ, ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಇದೀಗ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿ ದ್ದಾರೆ.
Spread the love