ಬ್ರೇಕ್ ವೈಫಲ್ಯಕ್ಕೀಡಾದ ಬಸ್ ನಿಯಂತ್ರಿಸಿ ಪ್ರಯಾಣಿಕರ ರಕ್ಷಿಸಿದ ಚಾಲಕ!
ಮಂಗಳೂರು: ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ವಿಶಾಲ್ ಟ್ರಾವೆಲ್ಸ್ ಬಸ್ ಗುರುವಾರ ಬೆಳಗ್ಗೆ ನಗರದ ಬಲ್ಲಾಳ್ಬಾಗ್ ಬಳಿ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಆದರೆ ಹಿಂದಿನ ಚಕ್ರಗಳು ಫುಟ್ಪಾತ್ ಮೇಲಕ್ಕೆ ಬರಲು ಸಾಧ್ಯವಾಗದೆ, ಬಸ್ಸು ಮುಂದಕ್ಕೆ ಚಲಿಸದೆ ಅಲ್ಲೇ ನಿಂತಿದೆ. ಬೆಳಗ್ಗಿನ ವೇಳೆಯಾಗಿದ್ದರಿಂದ ಬಸ್ಸಿನಲ್ಲಿ ಸಾಕಷ್ಟು ಮಂದಿ ಪ್ರಯಾಣಿಕರಿದ್ದರು. ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳಕ್ಕೆ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.