Home Mangalorean News Kannada News ಭಗಿನಿ ಸಮಾಜದಲ್ಲಿ ಶಾಸಕ ಜೆ.ಆರ್.ಲೋಬೊ ಅವರ ದೀಪಾವಳಿ ಸಂಭ್ರಮಾಚರಣೆ

ಭಗಿನಿ ಸಮಾಜದಲ್ಲಿ ಶಾಸಕ ಜೆ.ಆರ್.ಲೋಬೊ ಅವರ ದೀಪಾವಳಿ ಸಂಭ್ರಮಾಚರಣೆ

Spread the love

ಭಗಿನಿ ಸಮಾಜದಲ್ಲಿ ಶಾಸಕ ಜೆ.ಆರ್.ಲೋಬೊ ಅವರ ದೀಪಾವಳಿ ಸಂಭ್ರಮಾಚರಣೆ

ಮಂಗಳೂರು:  ಜೆಪ್ಪುನಲ್ಲಿರುವ ಭಗಿನಿ ಸಮಾಜದಲ್ಲಿ ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ದೀಪಾವಳಿ ಸಂಭ್ರಮಾಚರಣೆ ಕಾರ್ಯಕ್ರಮ ಜರಗಿತು.  ಭಗಿನಿ ಸಮಾಜದ ಮಕ್ಕಳೊಂದಿಗೆ ಶಾಸಕ ಜೆ.ಆರ್.ಲೋಬೊ ಅವರು ದೀಪಾವಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.  ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ ಅವರು ಈ ಹಬ್ಬವು ಎಲ್ಲರಿಗೆ ಸುಖ, ಸಮೃದ್ಧಿಯನ್ನು ನೀಡಲಿ ಎಂದು ಹಾರೈಸಿದರು.

ದೀಪಾವಳಿ ಹಬ್ಬ ಪ್ರತಿಯೊಬ್ಬರ ಜೀವನದಲ್ಲಿ ಚೈತನ್ಯದ ಬೆಳಕು ನೀಡಲಿ ಎಂದು ಹಾರೈಸಿದ ಅವರು ಹೊಸ ಉತ್ಸಾಹವನ್ನು ತರಲಿ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸಲೀಂ, ಮಂಗಳೂರು ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ಡೆನ್ನೀಸ್ ಡಿಸಿಲ್ವಾ, ಕಾರ್ಪೊರೇಟರ್ ಗಳು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಬಜಾಲ್-ಕಲ್ಲಗುಡ್ಡೆ ರಸ್ತೆ ಅಭಿವೃದ್ಧಿಗೆ 30 ಲಕ್ಷ ರೂಪಾಯಿ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಬಜಾಲ್- ಕಲ್ಲಗುಡ್ಡೆ ರಸ್ತೆಯನ್ನು ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 30  ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು.

ಅವರು ಬಜಾಲ್-ಕಲ್ಲಗುಡ್ಡೆಯಲ್ಲಿ 30  ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.

ಮುಖ್ಯಮಂತ್ರಿಗಳು ಈ ರಸ್ತೆಯನ್ನು ಅಭಿವೃದ್ಧಿಗೊಳಿಸಲು ಅನುದಾನ ನೀಡಿದ್ದಾರೆ. ಈ ರಸ್ತೆಯನ್ನು ಮಾದರಿ ರಸ್ತೆಯನ್ನಾಗಿ ಮಾಡಬೇಕು ಎಂದು ಶಾಸಕರು ನುಡಿದರು.

ಮಂಗಳೂರನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿಗಳು ಆಸಕ್ತರಾಗಿದ್ದಾರೆ. ಅವರ ಇಚ್ಚೆಯಂತೆ ನಾವು ಜನಪ್ರತಿನಿಧಿಗಳು ಕೆಲಸ ಮಾಡಿ ಮಂಗಳೂರು ನಗರವನ್ನು ಮಾದರಿ ನಗರವನ್ನಾಗಿ ಅಭಿವೃದ್ಧಿ ಪಡಿಸುವ ಗುರುತರ ಹೊಣೆಗಾರಿಕೆ ನಿರ್ವಹಿಸಬೇಕು ಎಂದರು.

ಸಮಾರಂಭದಲ್ಲಿ ಮೇಯರ್ ಕವಿತಾ ಸನಿಲ್, ಉಪಮೇಯರ್ ರಜನೀಶ್ ಕಾಪಿಕಾಡ್, ಮುಖ್ಯಸಚೇತಕ ಎಂ.ಶಶಿಧರ್ ಹೆಗ್ಡೆ, ಸ್ಥಾಯಿ ಸಮಿತಿ ಅಧ್ಯಕ್ಷೆ ಸಬಿತಾ ಮಿಸ್ಕಿತ್, ಕಾರ್ಪೊರೇಟರ್ ಗಳಾದ ರಾಧಾಕೃಷ್ಣ, ಸುಮಯ್ಯ, ಮಂಗಳೂರು ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ಡೆನ್ನೀಸ್ ಡಿಸಿಲ್ವಾ, ಮಂಗಳೂರು ಮಹಾನಗರ ಪಾಲಿಕೆ ಉಪಆಯುಕ್ತ (ಅಭಿವೃದ್ಧಿ) ಕೆ.ಎಸ್.ಲಿಂಗೇಗೌಡ ಹಾಗೂ ಗುತ್ತಿಗೆದಾರ ಭಂಡಾರ್ಕರ್ ಮುಂತಾದವರು ಉಪಸ್ಥಿತರಿದ್ದರು.


Spread the love

Exit mobile version