ಭಾರತದ ಅಭಿವೃದ್ದಿಯಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರ – ಸುರೇಶ್ ಪಿ ಪ್ರಭು

Spread the love

ಭಾರತದ ಅಭಿವೃದ್ದಿಯಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರ – ಸುರೇಶ್ ಪಿ ಪ್ರಭು

ಉಡುಪಿ: 2047ಕ್ಕೆ ಭಾರತ ಅಭಿವೃದ್ಧಿಹೊಂದಿದ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿ ನಿಲ್ಲಬೇಕಾದರೆ ಸಹಕಾರಿ ಕ್ಷೇತ್ರದ ಕೊಡುಗೆಯೂ ಬಹಳ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸಹಕಾರಿ ಸಂಸ್ಥೆಗಳು ಯೋಜನೆಗಳನ್ನು ರೂಪಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯದ ರಾಷ್ಟೀಯ ಸಹಕಾರಿ ನೀತಿ ಅಧ್ಯಕ್ಷ ಸುರೇಶ್ ಪಿ. ಪ್ರಭು ಹೇಳಿದರು.

ಅವರು  ಅಜ್ಜರಕಾಡು ಕಲ್ಮಂಜೆ ಟವರ್ಸ್ನಲ್ಲಿರುವ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವಿಸ್ತರಿತ ಹಾಗೂ ನವೀಕರಣಗೊಂಡ ಆಡಳಿತ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಮೀನುಗಾರರು ಕೇವಲ ಮೀನುಗಳನ್ನು ಹಿಡಿದು ತರುವುದು ಮಾತ್ರವಲ್ಲದೆ ಭಾರತದ 7600 ಕಿಮೀ ಉದ್ದ ಕರಾವಳಿಯನ್ನು ರಕ್ಷಿಸುವ ಕೆಲಸವನ್ನೂ ಮಾಡುತ್ತಾರೆ. ಸಂಕಾಸ್ಪದ ಬೋಟ್ಗಳ ಬಗ್ಗೆ ಭದ್ರತಾಪಡೆಗಳಿಗೆ ಮಾಹಿತಿಯನ್ನೂ ತಲುಪಿಸುತ್ತಾರೆ. ಹೀಗಾಗಿ ಮೀನುಗಾರರ ಸಮುದಾಯಕ್ಕೆ ಸಹಕಾರಿ ಕ್ಷೇತ್ರದಿಂದ ಹೆಚ್ಚಿನ ಸೌಲಭ್ಯ ಲಭಿಸುವಂತಾಗಲಿ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಗುಜ್ಜಾಡಿ ಪ್ರಭಾಕರ ನಾಯಕ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್, ಉಮಾ ಸುರೇಶ್ ಪ್ರಭು, ಮಹಾಲಕ್ಷ್ಮೀ ಬ್ಯಾಂಕಿನ ಅಧ್ಯಕ್ಷ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಿದಿಯೂರು ಹೋಟೆಲ್ ಆಡಳಿತ ನಿರ್ದೇಶಕ ಭುವನೇಂದ್ರ ಕಿದಿಯೂರು, ಕಾರ್ತಿಕ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಹರಿಯಪ್ಪ ಕೋಟ್ಯಾನ್, ಮತ್ಸ್ಯೋದ್ಯಮಿ ಸಾಧು ಸಾಲ್ಯಾನ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ. ಎನ್. ಶಂಕರ ಪೂಜಾರಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ , ಜೆರ್ರಿ ವಿನ್ಸೆಂಟ್ ಡಯಾಸ್ ಮೊದಲಾದವರು ಉಪಸ್ಥಿತರಿದ್ದರು.


Spread the love