ಭಾರತ್ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

Spread the love

ಭಾರತ್ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಭಾರತ್ ಬಂದ್ಗೆ ಉಡುಪಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಉಡುಪಿಯಲ್ಲಿ ಬೆಳಿಗ್ಗೆ ಕೆಲವೊಂದು ಬಸ್ಸುಗಳು ಸಂಚಾರ ಆರಂಭಿಸಿದರೂ ಕೂಡ ಕಾರ್ಮಿಕ ಸಂಘಟನೆಗಳ ನಾಯಕರು ಬಸ್ಸುಗಳನ್ನು ನಿಲ್ಲಿಸುವಂತೆ ಒತ್ತಾಯ ಮಾಡುತ್ತಿದ್ದ ದೃಶ್ಯ ಕಂಡುಬಂತು. 8 ಗಂಟೆಯ ಬಳಿಕ ಬಹುತೇಕ ಖಾಸಗಿ ಬಸ್ಸುಗಳು ಸಂಚಾರವನ್ನು ನಿಲ್ಲಿಸಿದ್ದು ಸರಕಾರಿ ಬಸ್ಸುಗಳು ಸಹ ಬಂದ್ ಗೆ ಬೆಂಬಲ ಸೂಚಿಸಿ ರಸ್ತೆಗೆ ಇಳಿದಿಲ್ಲ.

ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಂದ್ಗೆ ಬೆಂಬಲ ನೀಡುವ ಕುರಿತು ಹೋಟೆಲ್ ಮಾಲೀಕರ ಸಂಘದ ನಿರ್ಧಾರ ಸ್ಪಷ್ಟವಿಲ್ಲ. ಆದರೆ, ಜನ, ಸಂಚಾರ ವ್ಯವಸ್ಥೆ ಹಾಗೂ ಪರಸ್ಥಿತಿ ನೋಡಿಕೊಂಡು ಹೋಟೆಲ್ ತೆರೆಯಲು ಚಿಂತನೆ ನಡೆಸಿದ್ದಾರೆ. ಆಸ್ಪತ್ರೆಗಳು, ಮೆಡಿಕಲ್ ಶಾಪ್ ಹಾಗೂ ಅಂಗಡಿ ಮುಂಗಟ್ಟುಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದಾರೆ.


Spread the love