ಭಾರಿ ಮಳೆ ಹಿನ್ನಲೆ ಉಡುಪಿ ಜಿಲ್ಲೆಯಲ್ಲಿ ಅಗಸ್ಟ್ 13ರಂದು ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಮುಂಜಾಗೃತ ಕ್ರಮವಾಗಿ ಅಗಸ್ಟ್ 13ರಂದು ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.
ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು ಭಾನುವಾರವೂ ಭಾರಿ ಗಾಳಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಸೋಮವಾರ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಪದವಿ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ದಟ್ಟ ಮೋಡ ಕವಿದ ವಾತಾವರಣವಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.