ಭಾರಿ ಮಳೆ ಹಿನ್ನಲೆ ದಕ ಜಿಲ್ಲೆಯ ಶಾಲೆಗಳಿಗೆ ಶನಿವಾರ ರಜೆ ಘೋಷಣೆ
ಮಂಗಳೂರು: ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಶನಿವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಶನಿವಾರದಿಂದ ಸೋಮವಾರದವರೆಗೆ ಪ್ರತಿದಿನ 200 ಮೀಟರ್ ಗಿಂತ ಮೇಲ್ಪಟ್ಟು ಮಳೆಯಾಗುವ ನಿರೀಕ್ಷೆಯಿದ್ದು, ಮೀನುಗಾರರು ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯದಂತೆ ಸೂಚನೆ