ಭಾರೀ ಮಳೆ: ನಾಳೆ (ಆ.1) ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Spread the love

ಭಾರೀ ಮಳೆ: ನಾಳೆ (ಆ.1) ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಯಲ್ಲಿ ಆ. 1ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಅಗಸ್ಟ್ 1ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಿಸಿರುವುದಿಲ್ಲ


Spread the love