Home Mangalorean News Kannada News ಭಾರೀ ಮಳೆ ಹಿನ್ನಲೆ: ಜು. 5 (ನಾಳೆ) ಪ್ರಾಥಮಿಕ, ಪ್ರೌಢ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನಲೆ: ಜು. 5 (ನಾಳೆ) ಪ್ರಾಥಮಿಕ, ಪ್ರೌಢ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Spread the love

ಭಾರೀ ಮಳೆ ಹಿನ್ನಲೆ: ಜು. 5 (ನಾಳೆ) ಪ್ರಾಥಮಿಕ, ಪ್ರೌಢ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಭಾರೀ ಮಳೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ  ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.5ರ ಶುಕ್ರವಾರ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ. ಪ್ರೌಢ ಶಾಲೆ. ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಘೋಷಣೆ ಮಾಡಿ ಕುಂದಾಪುರ ಸಹಾಯಕ ಆಯುಕ್ತರಾದ ರಶ್ಮೀ ಆದೇಶ ಹೊರಡಿಸಿದ್ದಾರೆ

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

ಕಾಲೇಜುಗಳಲ್ಲಿ ವಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಮರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.

1. ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.

2. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುವುವ ಬಗ್ಗೆ ಗಮನವಹಿಸುವುದು.

3. ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.

4. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ, ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

5. ಈಗ ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯವನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.

6. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳ ನೀರು ಇರುವ ತಗು, ಪ್ರದೇಶ, ಕರೆ. ನದಿ ತೀರ ಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.

7. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.

8. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು,


Spread the love

Exit mobile version