Home Mangalorean News Kannada News ಮಂಗಳೂರಿಗೆ ಮೋದಿ ಆಗಮನ; ಕಾರ್ಯಕರ್ತರೊಂದಿಗೆ ಗೆಲುವಿನ ಸಂಭ್ರಮ ಆಚರಿಸಿದ ಪ್ರಧಾನಿ

ಮಂಗಳೂರಿಗೆ ಮೋದಿ ಆಗಮನ; ಕಾರ್ಯಕರ್ತರೊಂದಿಗೆ ಗೆಲುವಿನ ಸಂಭ್ರಮ ಆಚರಿಸಿದ ಪ್ರಧಾನಿ

Spread the love

ಮಂಗಳೂರಿಗೆ ಮೋದಿ ಆಗಮನ; ಕಾರ್ಯಕರ್ತರೊಂದಿಗೆ ಗೆಲುವಿನ ಸಂಭ್ರಮ ಆಚರಿಸಿದ ಪ್ರಧಾನಿ

ಮಂಗಳೂರು: ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶದ ಬಳಿಕ ಹಿಗ್ಗಿರುವ ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡುವ ಸಲುವಾಗಿ ಸೋಮವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಕಾರ್ಯಕರ್ತರೊಂದಿಗೆ ಚುನಾವಣೆಯ ಗೆಲುವಿನ ಸಂಭ್ರಮವನ್ನು ಆಚರಿಸಿಕೊಂಡರು.

ಹೊಸದಿಲ್ಲಿಯಿಂದ ವಾಯುಪಡೆಯ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ಪ್ರಧಾನಿಯನ್ನು ಕೇಂದ್ರ ನೌಕಾಯಾನ ರಾಜ್ಯ ಸಚಿವ ಪಿ ರಾಧಾಕೃಷ್ಣನ್, ರಾಜ್ಯ ಪೋಲಿಸ್ ಮಹಾ ನಿರ್ದೇಶಕಿ ನಿಲಮಣಿ ರಾಜು, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಸುನೀಲ್ ಕುಮಾರ್, ಎಸ್ ಅಂಗಾರ, ಜಿಪಂ ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು, ದಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸ್ವಾಗಿಸಿತಿದರು.

ಮೋದಿ ಅವರನ್ನು ಸ್ವಾಗತಿಸಲು ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗ ಸಾವಿರಾರು ಮಂದಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದರು.

ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣಾ ವಿಜಯೋತ್ಸವ ಆಚರಣೆಗೆ ಸೇರಿರುವ ಕಾರ್ಯಕರ್ತರು ಪ್ರಧಾನಿಗೆ ಅದ್ದೂರಿ ಸ್ವಾಗತ ನೀಡಿದರು. ಕೊಂಬು, ಕಹಳೆ, ಚಂಡೆ ವಾದನದ ಅಬ್ಬರದೊಂದಿಗೆ ಜತೆಗೆ ಕಾರ್ಯಕರ್ತರು, ‘ಮೋದಿ, ಮೋದಿ’ ಎಂದು ಕೂಗುತ್ತಿದ್ದರು.


Spread the love

Exit mobile version