Home Mangalorean News Kannada News ಮಂಗಳೂರಿನಲ್ಲಿ ಅನೈತಿಕ ಪೊಲೀಸ್ ಗಿರಿ: ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರಿನಲ್ಲಿ ಅನೈತಿಕ ಪೊಲೀಸ್ ಗಿರಿ: ಇಬ್ಬರು ಪೊಲೀಸ್ ವಶಕ್ಕೆ

Spread the love

ಮಂಗಳೂರಿನಲ್ಲಿ ಅನೈತಿಕ ಪೊಲೀಸ್ ಗಿರಿ: ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರು: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಅಂಗಡಿಯೊಂದರ ಇಬ್ಬರು ಉದ್ಯೋಗಿಗಳ ಮೇಲೆ ಅನೈತಿಕ ಪೊಲೀಸ್ಗಿರಿ ಎಸಗಿದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದಿರುವವರನ್ನು ಅಕ್ಷಯ್ ರಾವ್ ಹಾಗು ಶಿಬಿನ್ ಪಡಿಕಲ್ ಎಂದು ಗುರುತಿಸಲಾಗಿದೆ

ಸೋಮವಾರ ರಾತ್ರಿ ಸುಮಾರು 8 ಗಂಟೆಗೆ ನಗರದ ಮುಳಿಹಿತ್ಲು ಎಂಬಲ್ಲಿನ ಸ್ಪೋರ್ಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಮತ್ತು ಸೌಜನ್ಯಾ ಎಂಬವರು ಮೊಬೈಲ್ ರಿಪೇರ್ ಮಾಡಿಸಿಕೊಂಡು ನಗರದ ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ತೆರಳುವಾಗ ಇಬ್ಬರು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದು ಉದ್ಯೋಗಿಗಳನ್ನು ತಡೆದು “ನೀವು ಹಿಂದೂ -ಮುಸ್ಲಿಮ್ ಎಲ್ಲಿಗೆ ಹೋಗುತ್ತಿದ್ದೀರಿ?” ಎಂದು ಪ್ರಶ್ನಿಸಿ ಅನೈತಿಕ ಪೊಲೀಸ್ಗಿರಿ ನಡೆಸಿದ್ದಾರೆ ಎನ್ನಲಾಗಿದೆ.

ಅಷ್ಟರಲ್ಲಿ ಹೊಯ್ಸಳ ವಾಹನದ ಪೊಲೀಸರು ಇಬ್ಬರು ಉದ್ಯೋಗಿಗಳನ್ನು ರಕ್ಷಣೆ ಮಾಡಿ ಠಾಣೆಗೆ ಕರೆ ತಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಪಾಂಡೇಶ್ವರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


Spread the love

Exit mobile version