ಮಂಗಳೂರಿನಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಮಾತ್ರ ಅವಶ್ಯಕ ಸೇವೆಗಳು ಲಭ್ಯ
ಮಂಗಳೂರು: ಮಂಗಳೂರಿನಲ್ಲಿ ಕೋರೊನಾ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಭಾನುವಾರ ಸೆಕ್ಷನ್ 144 ಜಾರಿಗೆಗೊಳಸಿದ್ದು ಹೆಚ್ಚುವರಿಯಾಗಿ ಕೆಲವೊಂದು ಸೇವೆಗಳಲ್ಲಿ ನಿರ್ಬಂಧಗಳನ್ನು ಜ್ಯಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಅವಶ್ಯಕ ಸೇವೆಗಳಾದ ಆಹಾರ, ಪಡಿತರ, ಅಂಗಡಿ, ಹಾಲು, ತರಕಾರಿ, ದಿನಸಿ, ಮಾಂಸ, ಮೀನು, ಹಣ್ಣಿನ ಮಾರುಕಟ್ಟೆ ಮತ್ತು ಸಗಟು ಮತ್ತು ಚಿಲ್ಲರೆ ವ್ಯಾಪಾರದ ಅಂಗಡಿಗಳನ್ನು ಮಾತ್ರ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ತೆರೆಯಲು ಅವಕಾಶವಿರುತ್ತದೆ.
ಎಲ್ಲಾ ಒಲಾ, ಉಬರ್, ಟ್ಯಾಕ್ಸಿ, ಆಟೋ ರಿಕ್ಷಾ ಮತ್ತು ಬಾಡಿಗೆ ವಾಹನ ಸೇವೆಗಳನ್ನು ಪ್ರಯಾಣಿಕರ ಸೇವೆಗಳಿಗೆ ಬಳಸತಕ್ಕದ್ದಲ್ಲ. ಕೇವಲ ತುರ್ತು ಪರಿಸ್ಥಿತಿ ಹಾಗೂ ಅವಶ್ಯಕ ವಸ್ತುಗಳ ಸಾಗಾಣಿಕೆ ಮಾತ್ರ ಬಳಸಲು ಅವಕಾಶ ನೀಡಲಾಗಿದೆ.
ಅವಶ್ಯಕ್ ಸೇವೆಗಳು ಮತ್ತು ವಸ್ತುಗಳು, ಆಹಾರ, ವೈದ್ಯಕೀಯ ಉಪಕರಣಗಳು, ಔಷದ, ಇಂಧನ ಹಾಗೂ ಕೃಷಿ ಉತ್ಪನ್ನಗಳ ಕಾರ್ಖಾನೆಗಳನ್ನು ಹೊರತುಪಡಿಸಿ ಉಳಿದ ಕೈಗಾರಿಕೆಗಳು/ಕಾರ್ಖಾನೆಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.