ಮಂಗಳೂರಿನಲ್ಲಿ ಭಾರಿ ಮಳೆ; ನದಿಯಂತಾದ ರಸ್ತೆಗಳು- ಜನಜೀವನ ಅಸ್ತವ್ಯಸ್ಥ
ಮಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶಿಸಿದ ಬೆನ್ನಲ್ಲೆ ನಗರದಲ್ಲಿ ಮಂಗಳವಾರ ಮಳೆಯ ಆರ್ಭಟ ಶುರುವಾಗಿದೆ. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು, 9 ಗಂಟೆಗೆ ಶುರುವಾದ ಮಳೆ ನಿರಂತರವಾಗಿ ಸುರಿಯುತ್ತಿದೆ.
ನಗರಕ್ಕೆ ಪ್ರವೇಶ ಕಲ್ಪಿಸುವ ಪಡೀಲ್, ಪಂಪ್ ವೆಲ್ ಜಂಕ್ಷನ್ ರಸ್ತೆಗಳಲ್ಲಿ ನೀರು ನಿಂತಿದ್ದು, ಸುಮಾರು ೪೫ ನಿಮಿಷ ವಾಹನಗಳ ಸಂಚಾರ ಸ್ಥಗಿತವಾಗಿತ್ತು. ಪಂಪ್ ವೆಲ್ ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.
ಪಿವಿಎಸ್ ವೃತ್ತ, ಕದ್ರಿ ವೃತ್ತ, ಮಲ್ಲಿಕಟ್ಟೆ, ಸೇರಿದಂತೆ ಹಲವೆಡೆ ಮಳೆ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ರಸ್ತೆಯ ಮೇಲೆ ನೀರು ಹರಿಯುತ್ತಿರುವ ಪರಿಣಾಮ ವಾಹನ ಸವಾರರು ಕಷ್ಟಕ್ಕೆ ಸಿಲುಕಿದರು.