ಮಂಗಳೂರು : ನಗರದ ಬಿಜೈ ಕೆಎಸ್ಆರ್ಟಿಸಿ ಬಸ್ನಿಲ್ದಾಣದ ವಾಹನ ಪಾರ್ಕಿಂಗ್ ಬಳಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೋಲೀಸರು ಎಪ್ರಿಲ್ 23 ರಂದು ಬಂಧಿಸಿರುತ್ತಾರೆ.
ಬಂಧಿತ ಆರೋಪಿಗಳನ್ನು ಇಮ್ತಿಯಾಜ್ ಅಹಮ್ಮದ್ (30) ಫರಂಗೀಪೇಟೆ, ಮುಸ್ಥಾಫ (29), ಕಾರ್ನಾಡ್ ಮೂಲ್ಕಿ.
ಆರೋಪಿಗಳಿಂದ ಸುಮಾರು 300 ಗ್ರಾಂ ತೂಕದ ಗಾಂಜಾವನ್ನು ಹಾಗೂ ಮೊಬೈಲ್ ಫೋನ್ನ್ನು ವಶಪಡಿಸಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡ ಸೊತ್ತಿನ ಮೌಲ್ಯ 6,500/- ಆಗಿರುತ್ತದೆ. ಆರೋಪಿಗಳು ಕೆ.ಎಸ್ ಆರ್ ಟಿ.ಸಿ ಬಸ್ ನಿಲ್ದಾಣದ ಬಳಿಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ವಿಚಾರಣೆ ವೇಳೆ ತಿಳಿದುಬಂದಿರುತ್ತದೆ. ಆರೋಪಿಗಳ ಪೈಕಿ ಇಮ್ತಿಯಾಸ್ ಅಹಮ್ಮದ್ ವಿರುದ್ಧ ಈ ಹಿಂದೆ ಗಾಂಜಾ ಮಾರಾಟ ಹಾಗೂ ಕೊಲೆ ಯತ್ನ ಪ್ರಕರಣಗಳು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಗಾಂಜಾವನ್ನು ಮುಂದಿನ ಕ್ರಮದ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ.ಎಸ್.ಮುರುಗನ್, ಐ.ಪಿ.ಎಸ್ ರವರ ನಿರ್ದೇಶನದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಮಾನ್ಯ ಪೊಲೀಸ್ ಉಪ-ಆಯುಕ್ತರಾದ ಶ್ರೀ. ಕೆ. ಸಂತೋಷ್ ಬಾಬು ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಮಾನ್ಯ ಪೊಲೀಸ್ ಉಪ-ಆಯುಕ್ತರಾದ ಶ್ರೀ.ವಿಷ್ಣುವರ್ಧನ.ಎನ್. ರವರುಗಳ ಮಾಗದರ್ಶನದಂತೆ, ಮಂಗಳೂರು ಸಿಸಿಬಿ ಘಟಕದ ಇನ್ಸ್ಪೆಕ್ಟರ್ ರವರಾದ ಶ್ರೀ.ವೆಲೆಂಟೈನ್ ಡಿ’ಸೋಜ ಹಾಗೂ ಪಿಎಸ್ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಯವರು ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.