ಮಂಗಳೂರು : ಆಯುಷ್ ರೋಗ ನಿರೋಧಕ ಔಷಧ ವಿತರಣೆ
ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಆಯುಷ್ ರೋಗನಿರೋಧಕ ಔಷಧಿಯನ್ನು ವಿತರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಮುರಳೀಧರ ಪೈ.ಬಿ, ಕಾರ್ಯಕ್ರಮದ ಔಚಿತ್ಯವನ್ನು ಮನಗಾಣಿಸಿದರು.
ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ರವಿ ಎಂ. ನಾಯ್ಕ, ಪೋಕ್ಸೋ ವಿಶೇಷ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶೆ ಸಾವಿತ್ರಿ ವಿ.ಭಟ್, 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸಪ್ಪ ಬಾಳಪ್ಪ ಜಕಾತಿ, 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶ ಟಿ.ಪಿ. ರಾಮಲಿಂಗೇಗೌಡ ಉಪಸ್ಥಿತರಿದ್ದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಮಹಮದ್ ಇಕ್ಬಾಲ್, ಆಯುಷ್ ಇಲಾಖೆಯ ಗುರಿ, ಉದ್ದೇಶಗಳ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು. ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ. ಹೇಮವಾಣಿ, ಔಷಧಿಯನ್ನು ಸೇವಿಸುವ ವಿಧಾನ ಹಾಗೂ ಪರಿಣಾಮದ ಬಗ್ಗೆ ಸವಿವರವಾಗಿ ವಿವರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರ ಅಧೀನದ ಎಲ್ಲಾ ಅಧಿಕಾರ ವರ್ಗ ಹಾಗೂ ಸಿಬ್ಬಂದಿ ವರ್ಗದ ಒಟ್ಟು ಸುಮಾರು 560 ಜನರಿಗೆ ಆಯುಷ್ ರೋಗನಿರೋಧಕ ಔಷಧಿಯನ್ನು ವಿತರಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪ.ಎ.ಜಿ. ಎಲ್ಲರನ್ನೂ ಸ್ವಾಗತಿಸಿದರು. ಡಾ.ಸಹನಾ ಪಾಂಡುರಂಗ ವಂದಿಸಿದರು.