ಮಂಗಳೂರು: ದ.ಕ.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ.ವೆನ್ಲಾಕ್ ಆಸ್ಪತ್ರೆ, ಮಹಾನಗರಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಹಾಗೂ ಡೆಂಗಿ ಮಲೇರಿಯಾ ನಿಯಂತ್ರಣ ಜಾಗೃತಿ ಅಭಿಯಾನವನ್ನು ಮಂಗಳೂರು ದ.ಕ.ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಎಪ್ರಿಲ್ 29 ರಂದು ಬೆಳಿಗ್ಗೆ 10 ಕ್ಕೆ ಏರ್ಪಡಿಸಲಾಗಿದೆ.
ರಾಜ್ಯದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಡೆಂಗಿ ಮಲೇರಿಯಾನಿಯಂತ್ರಣ ಅಭಿಯಾನದ ಉದ್ಘಾಟನೆಯನ್ನು ನೆರವೇರಿಸುವರು. ಯುವಜನ ಸೇವೆ,ಕ್ರೀಡೆ ಮತ್ತು ಮೀನುಗಾರಿಕೆ ಸಚಿವ ಕೆ.ಅಭಯಚಂದ್ರ ಜೈನ್ ಉಪಸ್ಥಿತರಿರುವರು. . ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ಶಾಸಕ ಜೆ.ಆರ್. ಲೋಬೋ ವಹಿಸುವರು.