ಮಂಗಳೂರು: ಕಡಿದು ಬಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತ್ಯು

Spread the love

ಮಂಗಳೂರು: ಕಡಿದು ಬಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತ್ಯು

ಮಂಗಳೂರು: ಕಡಿದು ಬಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.

ಮೃತ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದ್ದು. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು.

ಗುರುವಾರ ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ಸ್ವಚ್ಚಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ- ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಇದನ್ನು ಕಂಡ ಇನ್ನೊಬ್ಬ ಚಾಲಕ ಗೋಣಿ ಚೀಲ ಹಿಡಿದು ರಕ್ಷಣೆಗೆ ಮುಂದಾಗಿದ್ದು, ಅವರೂ ವಿದ್ಯುತ್ ಅಘಾತಕ್ಕೆ ಒಳಗಾಗಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments