ಮಂಗಳೂರು: ಕೆಎಸ್ ಆರ್ ಟಿಸಿ ಬಸ್ ನಿರ್ವಾಹಕರು ಪಾಸ್ ಹೊಂದಿರುವ ವಿದ್ಯಾರ್ಥಿಗಳನ್ನು ಸರಕಾರಿ ಬಸ್ಸಿನಿಂದ ಕೆಳಗಿಳಿಸಿರುವುದಲ್ಲದೆ, ವಿದ್ಯಾರ್ಥಿಗಳ ವಿರುದ್ದ ಸುಳ್ಳು ಕೇಸು ದಾಖಲಿಸಿ ಶೋಷಿಸುತ್ತಿದ್ದಾರೆ ಎಂದು ಆರೋಪಿಸಿ ನ್ಯಾಶನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ನೇತೃತ್ವದಲ್ಲಿ ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಕ ಅಧಿಕಾರಿ ವಿಐ ಹೆಗ್ಡೆ ಅವರಿಗೆ ಮನವಿ ಸಲ್ಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಧರ್ಮಸ್ಥಳ-ಮಂಗಳೂರು ಹಾಗೂ ಮಣಿಹಳ್ಳಕ್ಕೆ ಸಾಗುವ ಕೆಎಸ್ ಆರ್ ಟಿಸಿ ಬಸ್ಸಿನಲ್ಲಿ ನಿರ್ವಾಹಕರು ಪಾಸ್ ಹೊಂದಿರುವ ವಿದ್ಯಾರ್ಥಿಗಳನ್ನು ಬಸ್ಸಿನಿಂದ ಕೆಳಗಿಳಿಸಿ ಶೋಷಿಸುತ್ತಿದ್ದು, ಬಸ್ಸಿನಿಂದ ಕೆಳಗಿಳಿಯಲು ಒಪ್ಪದ ವಿದ್ಯಾರ್ಥಿಗಳ ವಿರುದ್ದ ಸ್ಥಳೀಯ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಬರುತ್ತಿದ್ದಾರೆ ಎಂದು ದೂರು ಸಲ್ಲಿಸಲಾಗುತ್ತದೆ. ಕೆಲವು ಪ್ರದೇಶಗಳಿಗೆ ಬಸ್ಸಿನ ಕೊರತೆಯಿದ್ದು ಇದರಿಂದ ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿಗಳ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯ ದೊರಕಿಸಲಾಗುವುದು ಅಲ್ಲದೆ ವಿದ್ಯಾರ್ಥಿಗಳ ವಿರುದ್ದ ದೂರು ದಾಖಲಿಸಿದ ಬಸ್ ನಿರ್ವಾಹಕರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಕ ಅಧಿಕಾರಿ ವಿಐ ಹೆಗ್ಡೆ ಆಶ್ವಾಸನೆ ನೀಡಿದರು.
ಹಜವಿದ್ಯಾರ್ಥಿಗಳಾದ ರೆಯಾನ್ ಮೊನಿಸ್, ಶಮಿತಾ ಆಶೀತಾ ಪಿರೇರಾ ಇನ್ನಿತರರು ಉಪಸ್ಥಿತರಿದ್ದರು