ಮಂಗಳೂರು: ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ – ಅರ್ಜಿ ಆಹ್ವಾನ

Spread the love

ಮಂಗಳೂರು: ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ – ಅರ್ಜಿ ಆಹ್ವಾನ

ಮಂಗಳೂರು: ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಹೊಸದಾಗಿ ತುಂಬಲು ಅರ್ಹ ಆಸಕ್ತ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಜಿಲ್ಲಾಧಿಕಾರಿಯವರ ಕಚೇರಿಯ ಕಾನೂನು ಶಾಖೆಯಲ್ಲಿ ಲಭ್ಯವಿದೆ ಅರ್ಜಿ ಸಲ್ಲಿಸಲು ಆಗಸ್ಟ್ 5 ರಂದು ಕೊನೆಯ ದಿನ.

ಅರ್ಜಿದಾರರ ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಜಾತಿ, ವರ್ಗ ಮತ್ತು 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರುವ, ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವವುಳ್ಳ ವಿವಿಧ ರೀತಿಯ ಕ್ಲಿಷ್ಟಕರ ಮತ್ತು ಸಂಕೀರ್ಣ ವಿಚಾರಗಳನ್ನು ಒಳಗೊಂಡ ವಿವರ, ಅವಧಿ ಮತ್ತು ಅನುಭವಗಳ ಬಗ್ಗೆ ಪುರಾವೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಬಹುದು. ವಿಶೇಷ ಅರ್ಹತೆಗಳೇನಾದರೂ ಇದ್ದಲ್ಲಿ ಈ ಬಗ್ಗೆ ದಾಖಲೆ ಲಗೀಕರಿಸಬೇಕು.

ಅರ್ಜಿಗಳು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಂದ ಶಿಫಾರಸ್ಸುಗೊಂಡ ನಂತರವೇ ಸರ್ಕಾರಕ್ಕೆ ಸಲ್ಲಿಕೆಯಾಗಲು ಅರ್ಹತೆ ಪಡೆಯುತ್ತದೆ. ನಿಗದಿತ ಸಮಯದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


Spread the love