ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ಫುಡ್ ಪಾಯಿಸನ್: 30ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು
ಮಂಗಳೂರು: ಜಿಲ್ಲಾ ಕಾರಾಗೃಹದ ಸುಮಾರು ಮೂವತ್ತಕ್ಕೂ ಹೆಚ್ಚು ಮಂದಿ ವಿಚಾರಣಾಧೀನ ಖೈದಿಗಳು ಅಸ್ವಸ್ಥಗೊಂಡಿರುವ ಘಟನೆ ಬುಧವಾರ (ಮಾ.5) ಸಂಜೆ ನಡೆದಿದೆ.
ವಿಷಪೂರಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದು, ಖೈದಿಗಳನ್ನು ಆಂಬುಲೆನ್ಸ್ ಮೂಲಕ ನಗರದ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.