Home Mangalorean News Kannada News ಮಂಗಳೂರು ದಸರಾ ಮೆರವಣಿಗೆ:ವಾಹನ ಸಂಚಾರದಲ್ಲಿ ವ್ಯತ್ಯಾಸ, ಮದ್ಯದ ಅಂಗಡಿ ಬಂದ್

ಮಂಗಳೂರು ದಸರಾ ಮೆರವಣಿಗೆ:ವಾಹನ ಸಂಚಾರದಲ್ಲಿ ವ್ಯತ್ಯಾಸ, ಮದ್ಯದ ಅಂಗಡಿ ಬಂದ್

Spread the love

ಮಂಗಳೂರು ದಸರಾ ಮೆರವಣಿಗೆ:ವಾಹನ ಸಂಚಾರದಲ್ಲಿ ವ್ಯತ್ಯಾಸ, ಮದ್ಯದ ಅಂಗಡಿ ಬಂದ್

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ದಸರಾ ಉತ್ಸವದ ಶೋಭಾ ಯಾತ್ರೆಯು ಅಕ್ಟೋಬರ್ 24ರಂದು ನಡೆಯಲಿದ್ದು, ಆ ಪ್ರಯುಕ್ತ ಅಂದು ಮಧ್ಯಾಹ್ನ 2 ಗಂಟೆಯಿಂದ ಸಾರ್ವಜನಿಕರ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ವಾಹನ ಪಾಕಿರ್ಂಗ್ ಹಾಗೂ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡುವ ಅಗತ್ಯವೆಂದು ಪರಿಗಣಿಸಿ ಮೆರವಣಿಗೆ ಸಾಗುವ ರಸ್ತೆ ಮತ್ತು ಅವುಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಸಾರ್ವಜನಿಕರು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ಮಂಗಳೂರು ನಗರ ಪೋಲಿಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವರಾತ್ರಿ ಮೆರವಣಿಗೆ :ಮದ್ಯದ ಅಂಗಡಿ ಬಂದ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿ ದಸರಾ ಉತ್ಸವ ಆಚರಣೆ ಸಂದರ್ಭ ಮೆರವಣಿಗೆ ನಡೆಯಲಿದ್ದು, ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆ ನಡೆಯದಂತೆ ಕಾನೂನು ವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯ ವಿವಿಧ ಕಡೆ ದಸರಾ ಮೆರವಣಿಗೆ ನಡೆಯುವ ದಿನದಂದು ಬಾರ್, ವೈನ್ ಶಾಪ್ ಮತ್ತು ಮಧ್ಯದ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.
ಮೆರವಣಿಗೆ ಸಾಗುವ ಮಾರ್ಗದಲ್ಲಿ ಮತ್ತು ಆಸುಪಾಸಿನ ಸ್ಥಳಗಳಲ್ಲಿರುವ ಎಲ್ಲಾ ಮದ್ಯದ ಅಂಗಡಿ, ಬಾರ್, ವೈನ್ ಶಾಪ್ಗಳನ್ನು ಕಡ್ಡಾಯವಾಗಿ ಮುಚ್ಚಲು ಆದೇಶಿಸಲಾಗಿದೆ. ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿದೆ.


Spread the love

Exit mobile version