Home Mangalorean News Kannada News ಮಂಗಳೂರು-ದಾವಣಗೆರೆ ನೂತನ ಕೆ.ಎಸ್.ಆರ್.ಟಿ.ಸಿ ನಾನ್ ಎಸಿ ಸ್ಲೀಪರ್ ಸಾರಿಗೆ ಆರಂಭ

ಮಂಗಳೂರು-ದಾವಣಗೆರೆ ನೂತನ ಕೆ.ಎಸ್.ಆರ್.ಟಿ.ಸಿ ನಾನ್ ಎಸಿ ಸ್ಲೀಪರ್ ಸಾರಿಗೆ ಆರಂಭ

Spread the love

ಮಂಗಳೂರು-ದಾವಣಗೆರೆ ನೂತನ ಕೆ.ಎಸ್.ಆರ್.ಟಿ.ಸಿ ನಾನ್ ಎಸಿ ಸ್ಲೀಪರ್ ಸಾರಿಗೆ ಆರಂಭ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ ವಿಭಾಗದ, ದಾವಣಗೆರೆ ಘಟಕದಿಂದ ನೂತನವಾಗಿ ಮಂಗಳೂರಿನಿಂದ ದಾವಣಗೆರೆಗೆ ಹೊಸ ನಾನ್ ಎಸಿ ಸ್ಲೀಪರ್ ಸಾರಿಗೆಯನ್ನು ವಯಾ ಉಡುಪಿ, ಮಣಿಪಾಲ್, ಕುಂದಾಪುರ ಶಿವಮೊಗ್ಗ ಮಾರ್ಗವಾಗಿ ಸಂಚರಿಸಲಿದೆ.

    ನೂತನ ಸಾರಿಗೆಗಳ ಕಾರ್ಯಾಚರಣೆಯ ವಿವರ ಇಂತಿವೆ: ಮಂಗಳೂರಿನಿಂದ ರಾತ್ರಿ 10.30 ಗಂಟೆಗೆ ಹೊರಟು ದಾವಣಗೆರೆ ಬೆಳಿಗ್ಗೆ 7 ಗಂಟೆಗೆ ತಲುಪಲಿದೆ. ದಾವಣಗೆರೆಯಿಂದ ರಾತ್ರಿ 9.15 ಗಂಟೆಗೆ ಹೊರಟು ಬೆಳಿಗ್ಗೆ 6 ಗಂಟೆಗೆ ತಲುಪಲಿದೆ.  ಸಾರ್ವಜನಿಕರು ಸಾರಿಗೆಯ ಸದುಪಯೋಗವನ್ನು ಪಡೆದುಕೊಳ್ಳಬಹುದು.    ನಾನ್ ಎಸಿ ಸ್ಲೀಪರ್ ಸಾರಿಗೆಯಲ್ಲಿ ಪ್ರತಿ ಪ್ರಯಾಣಿಕರಿಗೆ 450 ದರ ವಿಧಿಸಲಾಗುತ್ತದೆ. ಸಾರ್ವಜನಿಕರು ಪ್ರಯಾಣದ ಅನುಕೂಲವನ್ನು  ಪಡೆಯುವಂತೆ ವಿಭಾಗೀಯ ನಿಯಂತ್ರಣಾಧಿಕಾರಿ, ಕರಾರಸಾಸಂ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.


Spread the love

Exit mobile version