Home Mangalorean News Kannada News ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚುಗಳಲ್ಲಿ ಪ್ರಾರ್ಥನೆಗಳ ಆರಂಭ

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚುಗಳಲ್ಲಿ ಪ್ರಾರ್ಥನೆಗಳ ಆರಂಭ

Spread the love

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚುಗಳಲ್ಲಿ ಪ್ರಾರ್ಥನೆಗಳ ಆರಂಭ

ಮಂಗಳೂರು: ಸರಕಾರದ ನಿಯಮಾಳಿಗಳನ್ನು ಪಾಲಿಸಿಕೊಂಡು ಜೂನ್ 13 ರಿಂದ ಮಂಗಳೂರು ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ಬಲಿಪೂಜೆ ಪ್ರಾರ್ಥನೆಗಳನ್ನು ನೆರವೇರಿಸಲಾಗುವುದು ಎಂದು ಧರ್ಮಾಧ್ಯಕ್ಷರಾದ ಅತಿ ವಂ ಡಾ ಪೀಟರ್ ಪಾವ್ಲ್ ಸಲ್ದಾನ್ಹಾ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ಚರ್ಚುಗಳಲ್ಲಿ ಬಲಿಪೂಜೆಗಳನ್ನು ನೆರವೇರಿಸುವ ಕುರಿತಂತೆ ಸರಕಾರ ಈಗಾಗಲೇ ಮಾರ್ಗದರ್ಶನಗಳನ್ನು ನೀಡಿದ್ದ ಅದರಂತೆ ಬೇಕಾದ ಸಿದ್ದತೆಗಳನ್ನು ಮಾಡಿಕೊಳ್ಳಬೇಕಾಗಿದೆ. ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಥರ್ಮಲ್ ಸ್ಕ್ರೀನರ್, ಸ್ಯಾನಿಟೈಸರ್, ಸ್ವಯಂಸೇವಕರು, ಆಸನ ವ್ಯವಸ್ಥೆ ಇತ್ಯಾದಿ ತಯಾರಿ ಮಾಡಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಆಯಾ ಚರ್ಚುಗಳ ಧರ್ಮಗುರುಗಳಿಗೆ ಸೂಚನೆಗಳನ್ನು ನೀಡಿದ್ದು ಎಲ್ಲಾ ನಿಯಮಗಳನ್ನು ಸಿದ್ದಪಡಿಸಕೊಂಡಿರುವುದು ಖಾತ್ರಿ ಪಡಿಸಿಕೊಂಡು ಜೂನ್ 13ರಿಂದ ಶನಿವಾರ ಮಂಗಳೂರು ಧರ್ಮಪ್ರಾಂತ್ಯದಲ್ಲಿ ಬಲಿಪೂಜೆಗಳನ್ನು ನೆರವೇರಿಸಬಹುದು. ಈ ಕುರಿತು ಹೆಚ್ಚಿನ ಮಾರ್ಗದರ್ಶನಗಳನ್ನು ಹಾಗೂ ಸೂಚನೆಗಳನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


Spread the love

Exit mobile version