ಮಂಗಳೂರು ನಗರ ‘ಸೀಲ್ ಡೌನ್’ ಎಂಬುದು ಸುಳ್ಳು: ಜಿಲ್ಲಾಡಳಿತ ಸ್ಪಷ್ಟನೆ
ಮಂಗಳೂರು: ಮಂಗಳೂರು ನಗರದಲ್ಲಿ ಸೀಲ್ ಡೌನ್ ಆಗಿದೆ ಎಂಬುದಾಗಿ ಕೆಲವು ಟಿವಿ ಚಾನೆಲ್ಗಳಲ್ಲಿ ಪ್ರಸಾರವಾಗುತ್ತಿರುವುದು ನಿರಾಧಾರ ಸುದ್ದಿ ಎಂದು ದ.ಕ. ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.
ಮಂಗಳೂರು ನಗರದಲ್ಲಿ ಯಾವುದೇ ಸೀಲ್ ಡೌನ್ ಪ್ರಕ್ರಿಯೆ ನಡೆಯುತ್ತಿಲ್ಲ. ಈಗಾಗಲೇ ಕಳೆದ ಕೆಲವು ದಿನಗಳಿಂದ ಲಾಕ್ ಡೌನ್ ಪ್ರಕ್ರಿಯೆ ಜಾರಿಯಲ್ಲಿದೆ. ಇದನ್ನೇ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ಎಂದು ಜಿಲ್ಲಾಡಳಿತ ಪ್ರಕಟನೆಯಲ್ಲಿ ತಿಳಿಸಿದೆ.