ಮಂಗಳೂರು: ನವೆಂಬರ್ 10 – ಹಜರತ್ ಟಿಪ್ಪು ಸುಲ್ತಾನ್ ಜಯಂತಿ

Spread the love

ಮಂಗಳೂರು: ನವೆಂಬರ್ 10 – ಹಜರತ್ ಟಿಪ್ಪು ಸುಲ್ತಾನ್ ಜಯಂತಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಆಶ್ರಯದಲ್ಲಿ ನವೆಂಬರ್ 10 ರಂದು ನೇತ್ರಾವತಿ ಸಭಾಂಗಣ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇಲ್ಲಿ ನಡೆಯಲಿರುವುದು.

ಪೂರ್ವಾಹ್ನ ಗಂಟೆ 10.30ಕ್ಕೆ ಕಾರ್ಯಕ್ರಮವು ನಡೆಯಲಿದ್ದು  ನಗರಾಭಿವೃದ್ಧಿ ಮತ್ತು ವಸತಿ ಸಚಿವರು, ಕರ್ನಾಟಕ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಜಿಲ್ಲೆಯ ಜನಪ್ರಿನಿಧಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

ಮಂಗಳೂರಿನ ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎ.ಉದಯ ಕುಮಾರ ಇವರು ಹಜರತ್ ಟಿಪ್ಪು ಸುಲ್ತಾನ್ ಜಯಂತಿಯ ಸಂದೇಶವನ್ನು ನೀಡಲಿರುವರು.

ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಿಲ್ಲಾಡಳಿತದ ಪರವಾಗಿ ಸಹಾಯಕ ನಿರ್ದೇಶಕ ರಾಜೇಶ್ ಜಿ. ಇವರ ಪ್ರಕಟಣೆ ತಿಳಿಸಿದೆ.


Spread the love