Home Mangalorean News Kannada News ಮಂಗಳೂರು: ನಿಷೇದಿತ ಮಾದಕ ವಸ್ತು ಮಾರಾಟಕ್ಕೆ ಯತ್ನ – ಇಬ್ಬರ ಬಂಧನ

ಮಂಗಳೂರು: ನಿಷೇದಿತ ಮಾದಕ ವಸ್ತು ಮಾರಾಟಕ್ಕೆ ಯತ್ನ – ಇಬ್ಬರ ಬಂಧನ

Spread the love

ಮಂಗಳೂರು: ನಿಷೇದಿತ ಮಾದಕ ವಸ್ತು ಮಾರಾಟಕ್ಕೆ ಯತ್ನ – ಇಬ್ಬರ ಬಂಧನ

ಮಂಗಳೂರು: ನಿಷೇದಿತ ಮಾದಕ ವಸ್ತು ಸುಮಾರು 132 ಗ್ರಾಂ ತೂಕದ Methamphetamine ಮತ್ತು 250 LSD ಸ್ಟ್ಯಾಂಪ್ ಡ್ರಗ್ನ್ನು, ಅಕ್ರಮವಾಗಿ ಸಾಗಾಟ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಶಿಶಿರ್ ದೇವಾಡಿಗ ಮತ್ತು ಶುಶಾನ್.ಎಲ್. ಎಂದು ಗುರುತಿಸಲಾಗಿದೆ.

ಪೊಲೀಸ್ ಆಯುಕ್ತರು, ಮಂಗಳೂರು ನಗರ ರವರ ನಿರ್ದೇಶನದಂತೆ,  ಉಪ-ಪೊಲೀಸ್ ಆಯುಕ್ತರು, ಮಂಗಳೂರು ನಗರ ರವರ ಮಾರ್ಗದರ್ಶನದಂತೆ ದಿನಾಂಕ. 4-12-2023 ರಂದು ಉಳ್ಳಾಲ ತಾಲೂಕು ಪೆರ್ಮನ್ನೂರು ಗ್ರಾಮದ ಸಂತೋಷನಗರ ಸಾರ್ವಜನಿಕ ರಸ್ತೆ ಬದಿಯಲ್ಲಿ ಕೆಎ-19-ಎಂಎಂ-7082 ನೇ ಬಿಳಿ ಬಣ್ಣದ ಸ್ವಿಪ್ಟ್ ಕಾರಿನಲ್ಲಿ ಬಂದಿರುವ ಆರೋಪಿಗಳಾದ ಶಿಶಿರ್ ದೇವಾಡಿಗ ಮತ್ತು ಶುಶಾನ್.ಎಲ್. ರವರು ನಿಷೇದಿತ ಮಾದಕ ವಸ್ತು ಸುಮಾರು 132 ಗ್ರಾಂ ತೂಕದ Methamphetamine ಮತ್ತು 250 LSD ಸ್ಟ್ಯಾಂಪ್ ಡ್ರಗ್ನ್ನು, ಅಕ್ರಮವಾಗಿ ಸಾಗಾಟ ಮಾಡಿ ಮಾರಾಟ ಮಾಡಲು ಬಂದಿರುವವರನ್ನು ಪತ್ತೆ ಮಾಡಿ ಇವರುಗಳ ವಶದಿಂದ ಮೇಲೆ ವಿವರಿಸಿದ ಮಾದಕ ವಸ್ತು, ನಗದು ಹಣ ರೂ.3,70,050/- ಹಾಗೂ ಸ್ವಿಪ್ಟ್ ಕಾರು ಹೀಗೇ ಒಟ್ಟು ರೂ.14,01,050-00 ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ದಾಳಿಯಲ್ಲಿ ಧನ್ಯ.ಎನ್.ನಾಯಕ ಸಹಾಯಕ ಪೊಲೀಸ್ ಆಯುಕ್ತರು, ಮಂಗಳೂರು ದಕ್ಷಿಣ ಉಪವಿಭಾಗರವರ ನೇತೃತ್ವದಲ್ಲಿ Anti-Drug Team ಪಿಎಸ್ಐ ಪುನಿತ್ ಗಾಂವ್ಕರ್, ಉಳ್ಳಾಲ ಠಾಣಾ ಪಿಎಸ್ಐ, ಸಂತೋಷಕುಮಾರ್.ಡಿ. ಹಾಗೂ ಸಿಬ್ಬಂದಿಗಳಾದ ಸಾಜು ನಾಯರ್, ಮಹೇಶ್, ಶಿವಕುಮಾರ್, ಅಕ್ಬರ್ ಯಡ್ರಾಮಿ ರವರು ಭಾಗವಹಿಸಿರುತ್ತಾರೆ.


Spread the love

Exit mobile version