ಮಂಗಳೂರು: ಪತ್ರಕರ್ತನ ಮೇಲೆ ಹಲ್ಲೆ ; ದ.ಕ.ಜಿಲ್ಲಾ ಪತ್ರಕರ್ತರ ಸಂಘ ಖಂಡನೆ

Spread the love

ಮಂಗಳೂರು: ಜಯಕಿರಣ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಆಸೀಫ್ ಸರಳೀಕಟ್ಟೆ ಅವರಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿರುವುದನ್ನು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಖಂಡಿಸಿದೆ.

ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಮೇಲೆ ನಿರಂತರವಾಗಿ ಹಲ್ಲೆ ನಡೆಸುತ್ತಿರುವ ಮತ್ತು ಅವರ ಕರ್ತವ್ಯಕ್ಕೆ ಧಕ್ಕೆ ತರುವಂತಹ ಕೆಲಸಗಳು ನಡೆಯುತ್ತಿದ್ದು, ಪತ್ರಿಕಾ ಸ್ವಾತಂತ್ರ್ಯದ ಮೇಲೆ ದಾಳಿ ನಡೆಸಲಾಗುತ್ತಿದೆ. ಇದನ್ನು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸುತ್ತದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ತೆಗೆದುಕೊಳ್ಳಬೇಕು. ಮಾಧ್ಯಮದವರು ಭಯ ಮುಕ್ತ ವಾತಾವರಣದಲ್ಲಿ ಕರ್ತವ್ಯ ನಿರ್ವಹಣೆಗೆ ಅವಕಾಶ ಮಾಡಿಕೊಡುವಂತೆ ಪೆÇಲೀಸ್ ವರಿಷ್ಠಾಧಿಕಾರಿಯವರಲ್ಲಿ ಒತ್ತಾಯಿಸಲಾಗುವುದು ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸೀಫ್ ಸರಳೀಕಟ್ಟೆ ಕರ್ತವ್ಯ ಮುಗಿಸಿ ಮನೆ ಕಡೆಗೆ ಆ್ಯಕ್ಟಿವಾ ಸ್ಕೂಟರ್‍ನಲ್ಲಿ ಹೋಗುತ್ತಿದ್ದಾಗ ಆರೋಪಿಗಳು ಅವರ ಸ್ಕೂಟರನ್ನು ತಡೆದು ಮಾರಾಣಾಂತಿಕವಾಗಿ ಹಲ್ಲೆಗೈದು ಕೊಲೆ ಬೆದರಿಕೆ ಒಡ್ಡಿದ್ದಾರೆ. ಆರೋಪಿಗಳನ್ನು ಪೆÇಲೀಸರು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಜಿಲ್ಲಾ ಪತ್ರಕರ್ತರ ಸಂಘವು ಆಗ್ರಹಿಸಿದೆ.


Spread the love