ಮಂಗಳೂರು: ಪಿಲಿಕುಳದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾಮಂಜೂರು ಧರ್ಮಜ್ಯೋತಿ ಸಮಾಜ ಸೇವಾ ಕೇಂದ್ರ ಮತ್ತು ಸೌಹಾರ್ದ ಮಹಿಳಾ ಒಕ್ಕೂಟದ ಸಹಕಾರದೊಂದಿಗೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ‘ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ’ ಮಾರ್ಚ್ 8 ರಂದು ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಂಗಳೂರು ಲನಿರ್ಂಗ್ ಲಿಂಕ್ಸ್ ಫೌಂಡೇಶನ್ ಮ್ಯಾನೇಜರ್ ಅನುರಾಧ ನಿತಿನ್ ಮಾತನಾಡಿ, ಮಹಿಳೆಯರು ಜಗತ್ತಿಗೆ ಬೆಳಕಾಗಿದ್ದಾರೆ ಹಾಗೂ ಅಪ್ರತಿಮ ಸಾಧನೆಯನ್ನು ಹಲವಾರು ಕ್ಷೇತ್ರಗಳಲ್ಲಿ ಮಾಡಿದ್ದಾರೆ ಎಂದು ಹೇಳುತ್ತಾ ಹಲವು ಮಹಿಳಾ ಸಾಧಕಿಯರ ಮಾಹಿತಿ ನೀಡಿ ಅಂತಹ ಸಾಧನೆ ಮಾಡಲು ಪ್ರೇರೇಪಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಮಿಷನ್ ಸಂಯೋಜಕಿ ಅನುμÁ್ಯ ಇವರು ಇಲಾಖೆಯ ವಿವಿಧ ಕಾರ್ಯಕ್ರಮಗಳು ಹಾಗೂ ಮಹಿಳಾ ಸಂಬಂಧಿ ಕಾನೂನು ಕಾಯ್ದೆಗಳ ಕುರಿತು ವಿವರವಾದ ಮಾಹಿತಿ ನೀಡಿದರು.
ಧರ್ಮಜ್ಯೋತಿ ಸಮಾಜ ಸೇವಾ ಕೇಂದ್ರದ ನಿರ್ದೇಶಕಿ ಸಿಸ್ಟರ್ ಜೋಯಲ್ ಲಸ್ರಾದೋ ಸ್ವಾಗತಿಸಿ ಪ್ರಸ್ತಾವನೆಗೈದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ.ರಾವ್ ಮಾತನಾಡಿ ಕೌಟುಂಬಿಕ ವಿಷಯಗಳಲ್ಲಿ ಮಹಿಳೆಯರು ಅತ್ಯಂತ ಜಾಗರೂಕರಾಗಿದ್ದು ಮಕ್ಕಳ ಮತ್ತು ಸಾಂಸಾರಿಕ ಸಮಸ್ಯೆಗಳ ಬಗ್ಗೆ ಸಮಯೋಚಿತ ತೀರ್ಮಾನಗಳನ್ನು ತೆಗೆದುಕೊಳ್ಳುವ ಹಾಗೂ ಸಂಬಂಧಗಳನ್ನು ಬೆಸೆಯುವ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಎಂದರು. ವಿದ್ಯಾವಂತ ಮಹಿಳೆ ಮಾತ್ರ ಮೌಲಿಕ ಯುವ ಜನಾಂಗವನ್ನು ರೂಪಿಸಬಲ್ಲಳು. ಅದು ದೇಶಕ್ಕೆ ಆಸ್ತಿಯಾಗಿದೆ ಎಂದರು.
ಕೇಂದ್ರದ ಕ್ಯುರೇಟರ್ ಜಗನ್ನಾಥ್ ಕಾರ್ಯಕ್ರಮ ನಿರೂಪಿಸಿ, ಸೌಹಾರ್ದ ಮಹಿಳಾ ಒಕ್ಕೂಟದ ಅಧ್ಯಕ್ಷೆ ಆಶಾ ವಂದಿಸಿದರು.