Spread the love
ಮಂಗಳೂರು: ಪೋಷಕರ ಪತ್ತೆಗೆ ಮನವಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ರೋಟ್ಟು ರಸ್ತೆಯಲ್ಲಿ ಅಂದಾಜು 3 ತಿಂಗಳ ಹೆಣ್ಣು ಮಗು ಪತ್ತೆಯಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯಧಾಮ ಮಕ್ಕಳ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ.
ಮಗುವಿನ ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ,
1 ನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ, ದೂರವಾಣಿ ಸಂಖ್ಯೆ:0824-2440004 ಸಂಪರ್ಕಿಸುವುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Spread the love