Home Mangalorean News Kannada News ಮಂಗಳೂರು: ಬಡವರಿಗೆ ಸ್ವಾಭಿಮಾನದ ಬದುಕು ರೂಪಿಸಿದವರು ಅರಸು: ಸಚಿವ ರಮಾನಾಥ ರೈ

ಮಂಗಳೂರು: ಬಡವರಿಗೆ ಸ್ವಾಭಿಮಾನದ ಬದುಕು ರೂಪಿಸಿದವರು ಅರಸು: ಸಚಿವ ರಮಾನಾಥ ರೈ

Spread the love

ಮಂಗಳೂರು: ಬಡವರಿಗೆ, ದುರ್ಬಲ ವರ್ಗದವರಿಗೆ ಸ್ವಾಭಿಮಾನದ ಬದುಕನ್ನು ಒದಗಿಸಿದ ಕೀರ್ತಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಹೇಳಿದ್ದಾರೆ.

devraj_urs_dc

ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ದೇವರಾಜ ಅರಸು ಅವರ 33ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇವರಾಜ ಅರಸು ಅವರ ಕಾರ್ಯಕ್ರಮಗಳು ಯಥಾವತ್ತಾಗಿ ಜಾರಿಯಾಗಿದ್ದು ದಕ್ಷಿಣ ಕ್ನನಡ ಜಿಲ್ಲೆಯಲ್ಲಿ. ಉಳುವವನೇ ಒಡೆಯ ಎಂಬ ಕ್ರಾಂತಿಕಾರಿ ಕಾರ್ಯಕ್ರಮವನ್ನು ಜಾರಿಗೊಳಿಸಿ, ಕೆಳಹಂತದ ಜನರಿಗೆ ಸ್ವಾಭಿಮಾನದ ಬದುಕು ನಡೆಸುವಂತಾಯಿತು. ಈ ಹಿನ್ನೆಲೆಯಲ್ಲಿ ದುರ್ಬಲ ವರ್ಗದವರು ಅರಸು ಅವರನ್ನು ಸದಾ ಸ್ಮರಿಸಬೇಕು ಎಂದು ಸಚಿವರು ಹೇಳಿದರು.

ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ಅರಸು ನೀಡಿದ ಕೊಡುಗೆ ಅವಿಸ್ಮರಣೀಯವಾಗಿದೆ. 20 ಅಂಶಗಳ ಕಾರ್ಯಕ್ರಮಗಳು ಅರಸು ಅವರಿಂದಾಗಿ ಕರ್ನಾಟಕದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿತು ಎಂದು ರಮಾನಾಥ ರೈ ಹೇಳಿದರು.

ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಮಾತನಾಡಿ, ಮೈಸೂರು ಪ್ರಾಂತ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ಕೀರ್ತಿ ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಹಾವನೂರು ಆಯೋಗ ರಚಿಸಿ, ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೂ ಮೀಸಲಾತಿ ಒದಗಿಸಿದ ಮಹಾನ್ ವ್ಯಕ್ತಿ ಅರಸು ಆಗಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೂಡಾ ಅಧ್ಯಕ್ಷ ಇಬ್ರಾಹಿಂ ಕೊಡಿಜಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀವಿದ್ಯಾ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವಾಗತಿಸಿದರು.


Spread the love

Exit mobile version