Home Mangalorean News Kannada News ಮಂಗಳೂರು: ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

Spread the love

ಮಂಗಳೂರು: ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾವೂರು ಗ್ರಾಮದ ಬೊಂದಿಲ್ ಮೈದಾನದ ಸಾರ್ವಜನಿಕ ಸ್ಥಳದಲ್ಲಿ ಬೈಕಿನಲ್ಲಿ ಪ್ಲಾಸ್ಟಿಕ್ ಕವರ್ ಗಳಲ್ಲಿ ಸುಮಾರು 19 ಗ್ರಾಂ ತೂಕದ 57,000 ಮೌಲ್ಯದ ಮೆಥಪಟೈನ್ ಎಂಬ ಮಾದಕ ದ್ರವ್ಯ ಹಾಗೂ ಮೊಬೈಲ್ ಫೋನ್ ವಶದಲ್ಲಿಟ್ಟುಕೊಂಡು ಮಾದಕ ದ್ರವ್ಯವನ್ನು ಮಾರಲು ಪ್ರಯತ್ನಿಸುತ್ತಿದ್ದ ಯುವಕರಿಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಧಿತರನ್ನು ಹಿಮನೀಶ್ ಮಂಗಳೂರು (26) ಮತ್ತು ಕೋಟೆಕಾರ್ ನಿವಾಸಿ ಪವನ್ ರಾಜ್ ಪಿ (28) ಎಂದು ಗುರುತಿಸಲಾಗಿದೆ.

ಮಂಗಳೂರು ನಗರದಲ್ಲಿ ಮಾದಕ ದ್ರವ್ಯಗಳ ದಂಧೆಯನ್ನು ಮಟ್ಟ ಹಾಕಲು ದಿಟ್ಟ ನಿರ್ಧಾರ ಕೈಗೊಂಡಿರುವ ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ ಈ ಕಾರ್ಯಾಚರಣೆ ಡಿಸಿಪಿ ಯಾವರಾದ ಸಿದ್ಧಾರ್ಥ ಗೋಯೆಲ್ ಮತ್ತು ದಿನೇಶ್ ಕುಮಾರ್ ಅಪರಾಧ ಮತ್ತು ಸಂಚಾರ ರವರ ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯಕ್ ರವರ ನೇತೃತ್ವದಲ್ಲಿ ಉತ್ತರ ಉಪ ವಿಭಾಗದ ಡ್ರೆಸ್ ಕೋಡ್ ಮತ್ತು ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆ ನಡೆಸಿರುತ್ತಾರೆ


Spread the love

Exit mobile version