Home Mangalorean News Kannada News ಮಂಗಳೂರು: ಮೇ 31 ರಂದು ವಿಶ್ವ ತಂಬಾಕು ದಿನಾಚರಣೆ

ಮಂಗಳೂರು: ಮೇ 31 ರಂದು ವಿಶ್ವ ತಂಬಾಕು ದಿನಾಚರಣೆ

Spread the love

ಮಂಗಳೂರು: ಮೇ 31 ರಂದು ವಿಶ್ವ ತಂಬಾಕು ದಿನಾಚರಣೆ

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮತ್ತು ಮಂಗಳೂರಿನ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಮೇ. 31 ರಂದು ಮಧ್ಯಾಹ್ನ 1.30ಕ್ಕೆ ನಗರದ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ.

, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಹ ನಿರ್ದೇಶಕರು ಹಾಗೂ ಪ್ರಾಂಶುಪಾಲರಾದ ಡಾ. ಸಿಪ್ರಿಯನ್ ಮೊಂತೇರೋ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಂಗಳೂರಿನ ನಗರ ಪೆÇಲೀಸ್ ಆಯುಕ್ತ ಅನುಪಮ ಅಗ್ರವಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಸಿ. ಬಿ. ರಿಷ್ಯಂತ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್ ಆನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ತಿಮ್ಮಯ್ಯ ಹೆಚ್.ಆರ್, ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.


Spread the love

Exit mobile version