ಮಂಗಳೂರು| ಯುನಿಸೆಕ್ಸ್ ಸೆಲೂನ್‌ನಲ್ಲಿ ದಾಂಧಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ

Spread the love

ಮಂಗಳೂರು| ಯುನಿಸೆಕ್ಸ್ ಸೆಲೂನ್‌ನಲ್ಲಿ ದಾಂಧಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಮಂಗಳೂರು: ನಗರದ ಬಿಜೈ ಕೆಎಸ್ಸಾರ್ಟಿಸಿ ಬಳಿ ಕಾರ್ಯಾಚರಿಸುತ್ತಿದ್ದ ಕಲರ್ಸ್ ಯುನಿಸೆಕ್ಸ್ ಸೆಲೂನ್‌ಗೆ ಗುರುವಾರ ನುಗ್ಗಿ ದಾಂಧಲೆಗೈದ ರಾಮಸೇನೆಯ 14 ಮಂದಿ ಕಾರ್ಯಕರ್ತರಿಗೆ ನ್ಯಾಯಾಲಯ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಯುನಿಸೆಕ್ಸ್ ಸೆಲೂನ್‌ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ಗುರುವಾರ ಮಧ್ಯಾಹ್ನ ವೇಳೆ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ನೇತೃತ್ವದ ಕಾರ್ಯರ್ತರು ನುಗ್ಗಿ ದಾಂಧಲೆಗೈದು ಸೆಲೂನ್‌ನಲ್ಲಿದ್ದ ಪೀಠೋಪಕರಣಗಳನ್ನು ಹಾನಿಗೈದಿದ್ದರು. ಅಲ್ಲದೆ ಸೆಲೂನ್‌ನಲ್ಲಿದ್ದ ಸಿಬ್ಬಂದಿಗಳಿಗೆ ನಿಂಧಿಸಿ, ಹಲ್ಲೆಗೈದು ನಿಂದಿಸಿ ಪರಾರಿಯಾಗಿದ್ದರು.

ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಘಟನೆ ನಡೆದ ಕೂಡಲೇ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಪ್ರಸಾದ್ ಅತ್ತಾವರ ಸಹಿತ 14 ಮಂದಿಯನ್ನು ಬಂಧಿಸಿದ್ದರು. ಶುಕ್ರವಾರ ಈ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


Spread the love
Subscribe
Notify of

0 Comments
Inline Feedbacks
View all comments